Advertisement
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಸಿ.ಎಂ.ಇಬ್ರಾಹಿಂ ಅವರಿಗೆ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
Related Articles
Advertisement
ಈ ಮಧ್ಯೆ, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಇದೇ ತಿಂಗಳ 28 ಮತ್ತು 29 ರಂದು ಜೆಡಿಎಸ್‌ವತಿಯಿಂದ ಆಕಾಂಕ್ಷಿಗಳಿಗೆ ಕಾರ್ಯಾಗಾರ ಆಯೋಜಿಸಿದ್ದು, ಅಲ್ಲಿಂದ ಚುನಾವಣೆ ಸಿದ್ಧತೆ ಆರಂಭಿಸಲಿದ್ದಾರೆ. ತಳಮಟ್ಟದಿಂದ ಪಕ್ಷ ಕಟ್ಟುವುದು ಹಾಗೂ ಕಾರ್ಯಕರ್ತರ ಸಮಸ್ಯೆ ಆಲಿಸುವ ಸಂಬಂಧ ಕೆಲವು ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.