Advertisement
ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಪೀಠದ ಕಿರಿಯ ಶ್ರೀಗಳಾದ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಭಾನುವಾರ ಇಲ್ಲಿ ಏರ್ಪಡಿಸಿದ್ದ ಗುರು ವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಸರಕಾರವು ದೇಶದ ಧರ್ಮ ಮತ್ತು ಸಂಸ್ಕೃತಿಗಳ ರಕ್ಷಣೆಗೆ ಕಟಿಬದ್ಧವಾಗಿ ದುಡಿಯುತ್ತಿದೆ. ಇದಕ್ಕಾಗಿ ನಾವೆಲ್ಲರೂ ಸಮರ್ಪಣಾ ಭಾವದಿಂದ ದುಡಿಯಲು ಸಿದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.
Related Articles
Advertisement
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಭಾರತೀಯ ವಿದ್ಯೆಗಳನ್ನು ಕಲಿಸಲು ಒತ್ತು ಕೊಡಲಾಗಿದೆ. ಇದರಿಂದ ಮುಂಬರುವ ತಲೆಮಾರುಗಳಲ್ಲಿ ಸಾಂಸ್ಕೃತಿಕ ಮನ್ವಂತರವೇ ಸೃಷ್ಟಿ ಆಗಲಿದೆ ಎಂದು ಸಚಿವರು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಶೃಂಗೇರಿ ಕಿರಿಯ ಶ್ರೀಗಳಾದ ವಿಧುಶೇಖರ ಭಾರತಿ ಸ್ವಾಮಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ