Advertisement

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

12:42 AM Oct 25, 2024 | Team Udayavani |

ಬೆಂಗಳೂರು: ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ ಅವರಿಗೆ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ. ರವಿ ಸಹಕಾರ ಇದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮತ್ತು ಬಿಜೆಪಿಯವರ ಬಗ್ಗೆ ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ವಿಶ್ಲೇಷಣೆಯನ್ನು ತೀವ್ರವಾಗಿ ಮಾಡಬಹುದು. ಆದರೂ ನಾನು ಆ ಗೋಜಿಗೆ ಹೋಗುವುದಿಲ್ಲ.

ಸಿ.ಟಿ. ರವಿ ಸಹಕಾರ ಯೋಗೇಶ್ವರ್‌ ಅವರ ಪರವಾಗಿದೆ ಎಂಬುದನ್ನು ಮಾತ್ರ ಹೇಳುತ್ತೇನೆ ಎಂದರು. ಚನ್ನಪಟ್ಟಣದಲ್ಲಿ ತಮಗೆ ಟಿಕೆಟ್‌ ನೀಡಲು ಶಿವಕುಮಾರ್‌ ಹಿಂದೇಟು ಹಾಕಿದರು ಎನ್ನುವ ಬಗ್ಗೆ ಕೇಳಿದಾಗ, ನಾನು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ತತ್‌ಕ್ಷಣ ಇನ್ನೊಂದು ಚುನಾವಣೆಗೆ ನಿಂತರೆ, ಜನರಿಗೆ ಒಳ್ಳೆಯ ಸಂದೇಶ ನೀಡಿದಂತೆ ಆಗುವುದಿಲ್ಲ. ಹೀಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೈಕಮಾಂಡ್‌ಗೆ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next