Advertisement
ಕೊಪ್ಪಳದ ಅಂಜನಾದ್ರಿ ಬೆಟ್ಟದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಬಿಎಸ್ ವೈ ಅವರು ನಮ್ಮ ನಾಯಕರು. ಅವರನ್ನು ನಾವು ಟಾರ್ಗೇಟ್ ಮಾಡಲ್ಲ. ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನೂ ನಾವು ಮಾಡುತ್ತಿಲ್ಲ. ನಮ್ಮ ದೆಹಲಿ ಭೇಟಿ ವಿಚಾರ, ನಮ್ಮಲ್ಲಿ ಆಂತರಿಕ ಸಮಸ್ಯೆಗಳು ಇವೆ. ಹಾಗಾಗಿ ನಾಯಕರ ಮುಂದೆ ಹೇಳಿಕೊಳ್ಳಲು ಹೋಗುತ್ತಿದ್ದೇವೆ ವಿನಃ ಬೇರೆ ವಿಷಯವಲ್ಲ ಎಂದರು.
Related Articles
Advertisement
ಇಲಾಖೆ ಕಾರ್ಯಕ್ರಮದ ನಿಮಿತ್ಯ ನಾನು ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದೇನೆ. ಸುಮ್ಮನೆ ನನ್ನ ಭೇಟಿ ವಿಚಾರ ಬೇರೆಯದಕ್ಕೆ ತಳುಕು ಹಾಕಬೇಡಿ. ಇನ್ನೂ ದೇವಸ್ಥಾನ ಆರಂಭವಾಗದಿದ್ದರೂ ನಿಯಮ ಉಲ್ಲಂಘಿಸಿ ದೇವಸ್ಥಾನದಕ್ಕೆ ಭೇಟಿ ನೀಡಿದ ವಿಚಾರದಲ್ಲಿ ನಾವು ಲಾಕ್ ಡೌನ್ ಓಪನ್ ಆದ ಬಳಿಕ ಇಲ್ಲಿಗೆ ಬಂದಿದ್ದೇವೆ. ಜನರು ಯಾರೂ ಒಳ ಬಂದಿಲ್ಲ ನಾವು ಮಾತ್ರ ತೆರಳಿದ್ದು ಇಲಾಖೆ ಅಭಿವೃದ್ಧಿ ವಿಚಾರ ಚರ್ಚೆ ಮಾಡಲು ಬಂದಿದ್ದೇವೆ. ನಾವು ಯಾವ ನಿಯಮವನ್ನೂ ಉಲ್ಲಂಘನೆ ಮಾಡಿಲ್ಲ ಎಂದರು.
ಅಂಜನಾದ್ರಿ ಅಭಿವೃದ್ಧಿಗೆ ಸಾವಿರಾರು ಕೋಟಿ ಬೇಕು :
ಅಂಜನಾದ್ರಿ ಬೆಟ್ಟವನ್ನು ಕೇವಲ ಪ್ರವಾಸೋದ್ಯಮಯೊಂದೇ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾಲ್ಕಾರು ಇಲಾಖೆ ಸಹಯೋಗದಲ್ಲಿ ನಾವು ಅಭಿವೃದ್ಧಿ ಮಾಡಬೇಕಿದೆ. ಇದಕ್ಕೆ ಸಾವಿರಾರು ಕೋಟಿ ರೂ ಬೇಕಾಗುತ್ತದೆ. ಇಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ಈ ದೃಷ್ಟಿಯಿಂದ ನಾವು ಹಲವು ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.
ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವುದಕ್ಕೆ ಇಲ್ಲಿ ಹಲವು ಸಾಕ್ಷಿ, ಪುರಾವೆಗಳಿವೆ. ಪೌರಾಣಿಕ, ಐತಿಹಾಸಿ ಹಿನ್ನೆಲೆ ಇದೆ. ಸುಮ್ನೆ ಯಾರೋ ಹೇಳುತ್ತಾರೆ ಎಂದು ನಾವು ಸುಮ್ಮನಿರೋದಲ್ಲ. ಅಂಜನಾದ್ರಿಯಲ್ಲಿಯೇ ಹನುಮಂತ ಜನಿಸಿದ್ದು ಎನ್ನುವುದಕ್ಕೆ ಹಲವು ಸಾಕ್ಷ್ಯ ಇವೆ. ಸರ್ಕಾರದ ನಿಲುವೂ ಇದೇ ಆಗಿದೆ. ಅಂಜಿನಾದ್ರಿ ಮಾಸ್ಟರ್ ಪ್ಲ್ಯಾನ್ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಬದ್ದ ಇದೆ ಎಂದರು.