Advertisement
ಚನ್ನಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿವೈ, ‘ಡಿಕೆಶಿ ಫೋನ್ ಟ್ಯಾಪಿಂಗ್ ಆರೋಪ ಮಾಡುತ್ತಿದ್ದಾರೆ. ಆದರೆ, ಅವರೇ ಒಬ್ಬ ಕಳ್ಳ. ಅವರು ಇನ್ನೊಬ್ಬರ ಮೇಲೆ ಆರೋಪ ಮಾಡೋಕೆ ಏನಿದೆ? ಫೋನ್ ಕದ್ದಾಲಿಕೆ ಆರೋಪ ಶುದ್ಧಸುಳ್ಳು. ಅವರ ಫೋನ್‍ನನ್ನು ಯಾವ ಉದ್ದೇಶಕ್ಕಾಗಿ ಕದ್ದಾಲಿಕೆ ಮಾಡಬೇಕು? ಅದರ ಅಗತ್ಯ ಏನಿದೆ? ಅವರ ಫೋನ್ ಕದ್ದಾಲಿಕೆ ಮಾಡಿ ಯಾವ ರಾಜ್ಯ ಗೆಲ್ಲಬೇಕಾಗಿದೆ?’ ಎನ್ನುವ ಮೂಲಕ ಡಿಕೆಶಿ ಆರೋಪಕ್ಕೆ ವ್ಯಂಗ್ಯವಾಗಿಯೇ ತಿರುಗೇಟು ನೀಡಿದರು.
Related Articles
Advertisement
ಇನ್ನು ಎಂಎಲ್ಸಿ ಆಗಿ ನಾಮನಿರ್ದೇನಗೊಂಡ ಮರುದಿನವೇ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಯೋಗೇಶ್ವರ್, ‘ಮಾಜಿ ಸಿಎಂ ಎಚ್‍ಡಿಕೆ ಮತ್ತು ಡಿಕೆಶಿ ವಿರುದ್ಧ ಹೋರಾಡಲು ನನಗೆ ಕಷ್ಟವೇನಿಲ್ಲ. ಇವರಿಬ್ಬರೂ ರಿಟೈಡ್ ಆಗಿರುವ ಕುದುರೆಗಳು’ ಎಂದು ಕುಟುಕಿದ್ದರು.
ಇದೀಗ ಎಚ್.ಡಿ. ಕುಮಾರಸ್ವಾಮಿ ಪರ ಮೃದುಧೋರಣೆ ವ್ಯಕ್ತಪಡಿಸುತ್ತಿರುವ ಸಿಪಿವೈ, ‘ಬಿಜೆಪಿ ಸರ್ಕಾರವನ್ನು ಕುಮಾರಸ್ವಾಮಿ ಹೊಗಳುತ್ತಿದ್ದಾರೆ. ಅವರು ನಮ್ಮ ಸರ್ಕಾರದ ಜೊತೆ ಹೊಂದಾಣಿಕೆಯಿಂದ ಇದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕುಮಾರಸ್ವಾಮಿ ಬಲಯುತವಾಗಿದ್ದಾರೆ. ಅವರು ಸರ್ಕಾರದಿಂದ ಹಣ ತಂದು ಅಭಿವೃದ್ಧಿ ಮಾಡಲು ಶಕ್ತರಾಗಿದ್ದಾರೆ. ನಾನು ಕೂಡ ಅವರೊಂದಿಗೆ ಸಹಕರಿಸುತ್ತೇನೆ’ ಎಂದರು.