Advertisement

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

12:51 PM Mar 28, 2024 | Team Udayavani |

ಚೆನ್ನೈ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ತಮಿಳುನಾಡಿನ ಮಾಜಿ ಕಾಂಗ್ರೆಸ್‌ ನಾಯಕ, ಭಾರತದ ಮೊದಲ ಗವರ್ನರ್‌ ಜನರಲ್‌ ಸಿ.ರಾಜಗೋಪಾಲಾಚಾರ್ಯ ಅವರ ಮೊಮ್ಮಗ ಸಿಆರ್‌ ಕೇಶವನ್‌ ಅವರನ್ನು ಬಿಜೆಪಿಯ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದೆ.

Advertisement

ಇದನ್ನೂ ಓದಿ:Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಳೆದ ವರ್ಷ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿ.ಆರ್.ಕೇಶವನ್‌ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಕೇಶವನ್‌ ಅವರನ್ನು ಹಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನಾಗಿಯೂ ಹೊಣೆ ನೀಡಿದೆ.

ಸಿ.ರಾಜಗೋಪಾಲಚಾರ್ಯ ಅವರು ದ್ರಾವಿಡ ಚಳವಳಿಯ ಹಿನ್ನೆಲೆಯಿಂದ ಬಂದಿದ್ದು, ಮದ್ರಾಸ್‌ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅವರು ತಮ್ಮದೇ ಛಾಪನ್ನು ಮೂಡಿಸಿದ್ದರು. ಆದರೆ ಇದೀಗ ತಮಿಳುನಾಡು ರಾಜಕೀಯ ರಂಗದಲ್ಲಿ ಬದಲಾಗುತ್ತಿರುವ ಸನ್ನಿವೇಶದಲ್ಲಿ ಕೇಶವನ್ ಕಾಂಗ್ರೆಸ್‌ ತೊರೆದು ಬಿಜೆಪಿ ಪಾಳಯ ಸೇರಿರುವುದು ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next