Advertisement

ಸಿ.ಟಿ. ರವಿ ರಾಜ್ಯ ಬಿಜೆಪಿ ಉಸ್ತುವಾರಿ ; ದಕ್ಷಿಣ ಭಾರತದ ಐದು ರಾಜ್ಯಗಳ ಹೊಣೆ

02:48 AM Oct 08, 2020 | Hari Prasad |

ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಚಿವ ಸಿ.ಟಿ. ರವಿ ಅವರಿಗೆ ಕರ್ನಾಟಕ ಸಹಿತ ದಕ್ಷಿಣ ಭಾರತದ ಐದು ರಾಜ್ಯಗಳ ಉಸ್ತುವಾರಿ ಹೊಣೆಯನ್ನು ತಾತ್ಕಾಲಿಕವಾಗಿ ವಹಿಸಲಾಗಿದೆ.

Advertisement

ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯ ಬಿಜೆಪಿ ಉಸ್ತುವಾರಿ ಹೊಣೆಯನ್ನೂ ಅವರಿಗೆ ತಾತ್ಕಾಲಿಕವಾಗಿ ವಹಿಸಲಾಗಿದೆ.

ಹಾಗೆಯೇ ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡಿರುವ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಅವರಿಗೆ ಈ ಐದೂ ರಾಜ್ಯಗಳ ಮಾಧ್ಯಮ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next