Advertisement
ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಸಿ.ಟಿ.ರವಿ ಅವರು ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯವಾಗಿ ನಿಂದಿಸಿ ಬಂಧನಕ್ಕೊಳಗಾಗಿರುವ ಪ್ರಕರಣ ನ್ಯಾಯಾಲಯದಲ್ಲಿದೆ. ಕೋರ್ಟ್ನಲ್ಲಿರುವ ಯಾವ ವಿಚಾರದ ಬಗ್ಗೆಯೂ ಚರ್ಚೆ ಮಾಡುವುದು ಸರಿಯಲ್ಲ. ಹೀಗಾಗಿ ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ. ಸಿ.ಟಿ.ರವಿ ಹಲ್ಲೆಗೆ ಯತ್ನಿಸಲು ಮುಂದಾಗಿದ್ದ 24 ಜನರ ತತ್ಕ್ಷಣ ಬಂಧಿಸದಿದ್ದರೆ ಇನ್ನೂ ಹೆಚ್ಚಿನ ಘಟನೆಗಳು ನಡೆಯುತ್ತಿತ್ತು. ಸದ್ಯಕ್ಕೆ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ನನಗೆ ಇಲಾಖೆಯಲ್ಲಿ ಸಾಕಷ್ಟು ಸ್ವಾತಂತ್ರ್ಯವಿದೆ. ಗೃಹ ಇಲಾಖೆಯನ್ನು ಓವರ್ ಟೇಕ್ ಮಾಡಿ ಈ ಬೆಳವಣಿಗೆ ಆಗಿದೆ ಎಂದು ನನಗೇನೂ ಅನ್ನಿಸುತ್ತಿಲ್ಲ. ನನ್ನ ಮೇಲೆ ಮುಖ್ಯಮಂತ್ರಿಗಳು ಬಿಟ್ಟರೆ ಬೇರೆ ಯಾರೂ ಇಲ್ಲ. ಇನ್ನು ಸಿ.ಟಿ.ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಲು ಮುಂದಾಗಿದ್ದ 24 ಜನರನ್ನು ಆ ಕ್ಷಣವೇ ಪೊಲೀಸರು ಬಂಧಿಸಿದ್ದಾರೆ. ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಒಂದು ವೇಳೆ ಬಂಧನ ಮಾಡದೇ ಹೋಗಿದ್ದರೆ ಇನ್ನೂ ಹೆಚ್ಚು ಘಟನೆಗಳು ಆಗುತ್ತಿತ್ತು. ಕೋರ್ಟ್ ನೀಡಿರುವ ತಡೆಯಾಜ್ಞೆ ಆದೇಶವನ್ನು ತೆರವುಗೊಳಿಸಲು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.