Advertisement

ದಿಶಾ ರವಿ ಬೆಂಬಲಿಸುವ ಕಾಂಗ್ರೆಸ್ ನವರಿಗೆ ನಾಚಿಕೆಯಾಗಬೇಕು: ಸಿ.ಟಿ.ರವಿ

03:29 PM Feb 16, 2021 | Team Udayavani |

ಚಿಕ್ಕಮಗಳೂರು: ಅರಾಜಕತೆ ಹುಟ್ಟು ಹಾಕುವುದು ಪ್ರಜಾಪ್ರಭುತ್ವದ ಲಕ್ಷಣವೇ? ಪ್ರಜಾಪ್ರಭುತ್ವದ ಹೋರಾಟಕ್ಕಾಗಿ ಅವಳ ಬಂಧನವಾಗಿಲ್ಲ. ಅರಾಜಕತೆ ಸೃಷ್ಟಿ ಮಾಡಿದ್ದಕ್ಕಾಗಿ ಆಕೆಯ ಬಂಧನವಾಗಿದೆ. ಆದರೆ ದಿಶಾ ರವಿ ಬಗ್ಗೆ ವೈಭವಿಕರಿಸಿ ಮಾತಾನಾಡುತಿದ್ದಾರೆ. ದಿಶಾ ರವಿ ಬೆಂಬಲಿಸುವ ಕಾಂಗ್ರೆಸ್ ನವರಿಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

Advertisement

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಬಗ್ಗೆ ನಿಮಗೆಲ್ಲಾ ಗೊತ್ತು. ದಿಶಾ ರವಿ ಹೆಸರು ಯಾರಿಗೆ ಗೊತ್ತಿತ್ತು? ಆಕೆಯ ಬಗ್ಗೆ ತನಿಖೆಯಾಗುತ್ತಿದೆ. ಪ್ರಾಥಮಿಕ ವರದಿಯಲ್ಲಿ ಅರಾಜಕತೆ ಸೃಷ್ಟಿ ಬಗ್ಗೆ ಇದ್ದ ಕಾರಣ ಬಂಧನವಾಗಿದೆ. ನಮಗೆ ನಮ್ಮ ದೇಶದ ಸಂವಿಧಾನ ದೊಡ್ಡದು, ದೇಶದ ಅಖಂಡತೆ ದೊಡ್ಡದು. ಇಂತಹ ಕೃತ್ಯ ಬೆಂಬಲಿಸಿ ಕಾಂಗ್ರೆಸ್ ತನ್ನ ನಾಯಕರನ್ನು ಕಳೆದುಕೊಂಡಿದೆ.  ಅಂತಹದ್ದೆ ಪರಿಸ್ಥಿತಿ ತಂದಿಡುವ ಹೀನ ಕೆಲಸ ಕಾಂಗ್ರೆಸ್ ಮಾಡಬಾರದು. ದೇಶದ ಅಖಂಡತೆಗೆ ಭಂಗ ತರುವ ಯಾವ ಶಕ್ತಿಯನ್ನು ಬೆಂಬಲಿಸಲ್ಲ, ಕ್ಷಮಿಸಲ್ಲ ಎಂದರು.

ಇದನ್ನೂ ಓದಿ:ಯಾವ ಐಎಎಸ್ ಅಧಿಕಾರಿ ಲಾಬಿಯೋ ಗೊತ್ತಿಲ್ಲ: ಕತ್ತಿ ವಿರುದ್ದ ರೇಣುಕಾಚಾರ್ಯ ಕಿಡಿ

ಸಚಿವ ಉಮೇಶ್ ಕತ್ತಿ ಹೇಳಿಕೆಯನ್ನು ಸಮರ್ಥಿಸಿದ ಸಿ.ಟಿ ರವಿ ಅವರು, ಬೈಕ್, ಫ್ರಿಡ್ಜ್, ಟಿವಿ ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ತೆಗೆದುಕೊಂಡಿದ್ದ ನಿಲುವು. ಈ ನಿಯಮದ ಪುನರುಚ್ಚಾರವನ್ನು ಈಗಿನ ಸಚಿವರು ಹೇಳಿದ್ದಾರೆ. ಆಗ ನಿಯಮ ಮಾಡಬೇಕಾದ್ರೆ ಕಾಂಗ್ರೆಸ್ ನವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರಾ? ಈಗ ಅರೆಪ್ರಜ್ಞಾವಸ್ಥೆಯಿಂದ ಕಾಂಗ್ರೆಸ್ ನವರು ಹೊರಬಂದಿದ್ದಾರೆ ಎಂದು ಟೀಕಿಸಿದರು.

ಗುದ್ದಾಟದ ಕಾರಣಕ್ಕೆ ಸಿದ್ದು ಭೇಟಿ: ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟವಿದೆ. ಬಹುಶಃ ಗುದ್ದಾಟದ ಕಾರಣಕ್ಕೆ ದೆಹಲಿಗೆ ಭೇಟಿ ಕೊಡ್ತಿರಬಹುದು. ನಾವು ಸಿದ್ದರಾಮಯ್ಯ ಪರವೂ ಅಲ್ಲ, ಡಿ ಕೆ ಶಿವಕುಮಾರ್ ಪರನೂ ಅಲ್ಲ. ನಾವು ಕಾಂಗ್ರೆಸ್ ವಿರುದ್ಧ, ಅವರೇನು ಮಾಡಿದರೂ ನಮಗೆ ಸಂಬಂಧವಿಲ್ಲ ಎಂದರು.

Advertisement

ಇದನ್ನೂ ಓದಿ:ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ: ಗಂಗಾವತಿ ಭಾಗದ ರೈತರ ಹೊಸ ಪ್ರಯೋಗ

ಎಚ್ ಡಿಕೆ ಸಣ್ಣ ಮಟ್ಟದ ಆಲೋಚನೆ: ಮನಸ್ಸಿಗೆ ಮೊಳೆ ಹೊಡೆಯುವ ವಿಚಾರ ಕುಮಾರಸ್ವಾಮಿಗೆ ಶ್ರೇಯಸ್ಸಲ್ಲ. ಕುಮಾರಸ್ವಾಮಿ ಸಣ್ಣ ಮಟ್ಟಕ್ಕೆ ಆಲೋಚನೆ ಮಾಡುತ್ತಾರೆ ಎಂದು ನನಗೆ ಅಂದುಕೊಂಡಿರಲಿಲ್ಲ. ಎಲ್ಲಿ, ಯಾರು ಮೊಳೆ ಹೊಡೆಯುವ ಕೆಲಸ ಮಾಡಿದ್ದಾರೆ ಎಂದರು.

ಎಲ್ಲಾ ಜಾತಿಯ ಜನ ಸ್ವಯಂ ಪ್ರೇರಿತವಾಗಿ ದೇಣಿಗೆ ನೀಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಜನರು ಹಣ ಕೊಡುತ್ತಿದ್ದಾರೆ. ಜನರು ಭಕ್ತಿಯಿಂದ ಕೊಡುವ ಹಣ ಬೇಕೇ ಹೊರತು ದಬ್ಬಾಳಿಕೆಯಿಂದ ಪಡೆಯುವಂತದಲ್ಲ. ಕುಮಾರಸ್ವಾಮಿ ಯಾಕೆ ಹೀಗೆ ಮಾತನಾಡುತ್ತಿದ್ದಾರೆ. ಇದು ಅವರಿಗೆ ಗೌರವ ತರುವ ಸಂಗತಿಯಲ್ಲ ಸುಳ್ಳು ಹೇಳುವ ಕೆಲಸ ಖಂಡನೀಯ ಎಂದು ಸಿ ಟಿ ರವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next