Advertisement

ಲೋಕಸಭಾ ಚುನಾವಣೆಯಲ್ಲಿ ಸೋತಾಗಲೇ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯಬೇಕಿತ್ತು

09:40 AM Nov 28, 2019 | Team Udayavani |

ಚಿಕ್ಕಬಳ್ಳಾಪುರ: ಕಳೆದ ಲೋಕಸಭಾ‌ ಚುನಾವಣೆಯಲ್ಲಿ ಬಿಜೆಪಿಯನ್ನು ಒಂದಂಕಿಗೆ ತರುತ್ತೇವೆಂದು ಹೇಳಿ 28 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಪಡೆದಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ನಾಯಕ ಸ್ಥಾನಕ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ತಿಳಿಸಿದರು.

Advertisement

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಾಗ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಂಡರು. ಆದರೆ ಸಿದ್ದರಾಮಯ್ಯ ಶಾಸಕಾಂಗ ನಾಯಕ ಸ್ಥಾನಕ್ಕೆ ಅಂಟಿಕೊಂಡು ಕೂಳಿತಿದ್ದು ಯಾವ ನೈತಿಕತೆ ಎಂದು ಪ್ರಶ್ನಿಸಿದರು, ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಅಳಿಯ, ಆದರೆ ಸಮ್ಮಿಶ್ರ ಸರ್ಕಾರ ಚಿಕ್ಕಬಳ್ಳಾಪುರಕ್ಕೆ ಏನು ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆ- ಮಗ ಲೋಕಸಭಾ ಚುನಾವಣೆಯಲ್ಲಿ ಸೋತರೂ ಸಿಎಂ ಕುರ್ಚಿಗೆ ಅಂಟಿಕೊಂಡು ಕೂತಿದ್ದು ನೈತಿಕತೆಯೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ರವಿ ವಾಗ್ದಾಳಿ ನಡೆಸಿದರು. ಅಧಿಕಾರ ಇದ್ದಾಗ ವಿಧಾನಸೌಧದಲ್ಲಿ ಆಡಳಿತ ನಡೆಸುವ ಬದಲು ವೆಸ್ಟ್ಎಂಡ್ ಹೋಟೆಲ್ ನಲ್ಲಿ ಅಧಿಕಾರ ನಡೆಸಿದ್ದು ಕುಮಾರಸ್ವಾಮಿ ನೈತಿಕತೆಯೆ ಎಂದು ಸಚಿವ ಸಿ.ಟಿ.ರವಿ ಪ್ರಶ್ನಿಸಿದರು.

ಅನರ್ಹ ಶಾಸಕರ ಬಗ್ಗೆ ಮಾತನಾಡುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಈ ಹಿಂದೆ ಯಾವ ಪಕ್ಷದಲ್ಲಿ ಇದ್ದರು. ಎಷ್ಟು ಪಕ್ಷಗಳನ್ನು ಬದಲಾಯಿಸಿದ್ದಾರೆ ಎಂದು ಒಮ್ಮೆ ಅತ್ಮವಲೋಕನ ಮಾಡಿಕೊಳ್ಳಲಿ ಎಂದರು. ರಮೇಶ್ ಕುಮಾರ್ ಹೇಳುವುದೇ ಬೇರೆ ನಡೆದುಕೊಳ್ಳುವುದೇ ಬೇರೆ ಎಂದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ, ತಸಲೂಕು ಅಧ್ಯಕ್ಷ ಆರ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next