Advertisement

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ): ಜ. 27ರಂದು ಮಂಗಳೂರಿನಲ್ಲಿ ಅರಿವು ಸಮಾವೇಶ

09:35 AM Jan 23, 2020 | Team Udayavani |

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್‌ ಶಾ ಅವರಿಗೆ ಅಭಿನಂದನೆ ಸಲ್ಲಿಸುವ ಹಾಗೂ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಬೃಹತ್‌ ಸಮಾವೇಶ ಜ. 27ರಂದು ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಜರಗಲಿದೆ.

Advertisement

ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು ಅವರು ಸಮಾವೇಶದ ಬಗ್ಗೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಪರಾಹ್ನ 3ರಿಂದ ಸಮಾವೇಶ ನಡೆಯಲಿದ್ದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅಭಿನಂದನೆ ಸಲ್ಲಿಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದ ಸಚಿವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ವಿಧಾನಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ. ಸಿಎಎ ಕಾಯ್ದೆ ಬಗ್ಗೆ ಇರುವ ಸಂಶಯ ಹಾಗೂ ಗೊಂದಲ ನಿವಾರಣೆ ಕೂಡಾ ಸಮಾವೇಶದ ಉದ್ದೇಶವಾಗಿದೆ ಎಂದರು.

ದ. ಕ. ಜಿಲ್ಲೆಯ 1,861 ಬೂತ್‌ಗಳಿಂದ ಹಾಗೂ ಉಡುಪಿ ಜಿಲ್ಲೆಯ ಸುಮಾರು
1,000 ಬೂತ್‌ಗಳಿಂದ ಪ್ರತಿಯೊಂದು ಬೂತ್‌ನಿಂದ ತಲಾ 100 ಮಂದಿಯಂತೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಕೆಲವು ಸಂಘಟನೆಗಳು ಸಹಯೋಗ ನೀಡಿವೆ. ಸಮಾವೇಶದಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ.

ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿವೆ. ಸಮಾವೇಶದಂದು ಉದ್ಯಮಿಗಳು, ವ್ಯಾಪಾರಸ್ಥರು ಮಧ್ಯಾಹ್ನ 3 ಗಂಟೆಯ ಬಳಿಕ ತಮ್ಮ ಉದ್ಯಮವನ್ನು ಸ್ಥಗಿತಗೊಳಿಸಿ ಭಾಗವಹಿಸಬೇಕು ಎಂದು ಬಿಜೆಪಿ ಮನವಿ ಮಾಡಿಕೊಳ್ಳುತ್ತಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next