ಗೋಕಾಕ: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ವಿಧೇಯಕವನ್ನು ಅರಿತು ಅದರ ನಿಜ ಸಂಗತಿಯನ್ನು ಪ್ರತಿ ಮನೆ-ಮನೆಗೆ ಹಾಗೂ ಪ್ರತಿ ಮನಕ್ಕೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬಿಜೆಪಿ ಅರಭಾವಿ ಮಂಡಲ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಭಿಯಾನಕ್ಕೆ
ಚಾಲನೆ ನೀಡಿ ಅವರು ಮಾತನಾಡಿದರು. ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳನ್ನು ತನ್ನ ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡು ಮತಯಾಚಿಸಿದ ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ ಶಾ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಅಭಿಯಾನ ಕೈಗೊಳ್ಳಲಾಗಿದೆ ಎಂದರು.
ಮಿಸ್ಡ್ ಕಾಲ್ ಮಾಡಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ಕ್ರೋಢಿಕರಿಸಲು ಬಿಜೆಪಿ ಟೋಲ್ ಫ್ರೀ ಸಂಖ್ಯೆ ಬಿಡುಗಡೆ ಮಾಡಿದ್ದು ಸಿಎಎ ಕಾಯ್ದೆಗೆ ಬೆಂಬಲ ಸೂಚಿಸಲು ಇಚ್ಛಿಸುವವರು 8866288662ಗೆ ಕರೆ ಮಾಡಬೇಕು. ಪ್ರತಿ ಮನೆ-ಮನೆಗೆ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಘಯೋಮನೀಬ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಮಾಜಿ ಅಧ್ಯಕ್ಷ ಸುಭಾಸ ಪಾಟೀಲ, ಮುಖಂಡರಾದ ಬಸವಂತ ಕಮತಿ, ಹನಮಂತ ತೇರದಾಳ, ಸಂತೋಷ
ಸೋನವಾಲ್ಕರ, ವೆಂಕನಗೌಡ ಪಾಟೀಲ, ಮುತ್ತೆಪ್ಪ ಕುಳ್ಳೂರ, ಪ್ರಭಾಶುಗರ ನಿರ್ದೇಶಕ ಮಾಳಪ್ಪ ಜಾಗನೂರ, ನ್ಯಾಯವಾದಿ ಲಕ್ಷ್ಮಣ ತಪಸಿ, ಪ್ರಕಾಶ ಮಾದರ, ಲಕ್ಕಪ್ಪ ತಹಶೀಲ್ದಾರ, ಭೀಮಶಿ ಮಗದುಮ್ಮ, ರವಿ ಪರುಶೆಟ್ಟಿ, ಪ್ರಮೋದ ಜೋಶಿ, ಬಿಜೆಪಿ ಪದಾಕಾರಿಗಳು ಉಪಸ್ಥಿತರಿದ್ದರು.