Advertisement

CAA; ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಕೇಂದ್ರ ಸರಕಾರ

06:17 PM Mar 11, 2024 | |

ಹೊಸದಿಲ್ಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ.

Advertisement

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ( CAA) ಜಾರಿಗೆ ತಂದಿದೆ. ಕಳೆದ ತಿಂಗಳು, ಗೃಹ ಸಚಿವ ಅಮಿತ್ ಶಾ ಅವರು ಈ ಸಂಬಂಧ ನಿಯಮಗಳನ್ನು ಹೊರಡಿಸಿ ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

2019 ಡಿಸೆಂಬರ್ 11 ರಂದು ಸಂಸತ್ತು ಜಾರಿಗೊಳಿಸಿದ ಸಿಎಎ, ಭಾರತದಾದ್ಯಂತ ತೀವ್ರ ಚರ್ಚೆ ಮತ್ತು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಅಫ್ಘಾನಿಸ್ಥಾನ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನದ ಹಿಂದೂ, ಸಿಖ್, ಜೈನ್, ಪಾರ್ಸಿ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ, 2014 ಡಿಸೆಂಬರ್ 31 ರಿಂದ ಮೊದಲು ತಾಯ್ನಾಡಿನಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸಿದ ಕಾರಣ ಭಾರತವನ್ನು ಪ್ರವೇಶಿಸಿದವರಿಗೆ ಭಾರತೀಯ ಪೌರತ್ವಕ್ಕೆ ತ್ವರಿತ ಮಾರ್ಗ ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತದೆ. ಇದರಲ್ಲಿ ಮುಸ್ಲಿಂ ಸಮುದಾಯ ಒಳಗೊಂಡಿರದೆ ಇರುವುದು ಕಾಂಗ್ರೆಸ್ ಸೇರಿ ನೂರಾರು ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next