Advertisement

ಪೌರತ್ವ ತಿದ್ದುಪಡಿ ಕಾಯ್ದೆ: ಪಶ್ಚಿಮ ಬಂಗಾಳದಲ್ಲಿ ಹೆಚ್ಚಿದ ಪ್ರತಿಭಟನೆ, ಹಿಂಸಾಚಾರ

10:02 AM Dec 16, 2019 | keerthan |

ಕೋಲ್ಕತ್ತಾ: ಇತ್ತೀಚೆಗಷ್ಟೇ ರಾಷ್ಟ್ರಪತಿಗಳ ಅಂಕಿತ ಪಡೆದ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಹೆಚ್ಚಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದಿದೆ.

Advertisement

ಪಶ್ಚಿಮ ಬಂಗಾಳದಲ್ಲಿ ಸತತ ಮೂರನೇ ದಿನವೂ ಹಿಂಸಾಚಾರ ಮುಂದುವರಿದಿದೆ. ಪ್ರತಿಭಟನಾಕಾರರು ಹಲವು ರಸ್ತೆಗಳನ್ನು ತಡೆದರು. ಹಲವು ಕಡೆ ರಸ್ತೆಯ ಮಧ್ಯೆ ಮರದ ತುಂಡುಗಳನ್ನು ಹಾಕಿ ಬೆಂಕಿ ಹಾಕಿ ಮುಷ್ಕರ ನಡೆಸಿದರು.

24ಪರಗಣ ಜಿಲ್ಲೆಯ ದೆಗಾಂಗ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳನ್ನು ದರೋಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ನಾಡಿಯಾದಲ್ಲಿ ಕೆಲವು ಪ್ರತಿಭಟನಾಕಾರರು ತಿದ್ದುಪಡಿ ಕಾಯ್ದೆಯ ಪ್ರತಿಗಳನ್ನು ಸುಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಲ್ಯಾಣಿ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ತಡೆದು ಪ್ರತಿಭಟಿಸಲಾಯಿತು.

ಪೊಲೀಸರು ಪ್ರತಿಭಟನಾ ಸ್ಥಳಗಳಿಗೆ ತೆರಳಿ ಶಾಂತಿ ಕಾಪಾಡುವ ವ್ಯವಸ್ಥೆ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next