ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(CAA)ಯ ನಿಯಮಾವಳಿಯ ಅಂತಿಮ ಕರಡು 2024ರ ಮಾರ್ಚ್ 30ರೊಳಗೆ ಸಿದ್ಧವಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತಿಳಿಸಿದ್ದಾರೆ.
ಇದನ್ನೂ ಓದಿ:Deepfake Video: ನಟಿ ಆಲಿಯಾ ಭಟ್ ಆಶ್ಲೀಲ ಸನ್ನೆಯ ವಿಡಿಯೋ ವೈರಲ್
24 ಪರಗಣಾಸ್ ಜಿಲ್ಲೆಯ ಠಾಕೂರ್ ನಗರದಲ್ಲಿ ಮಟುವಾ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಉತ್ತರಪ್ರದೇಶ ಬಿಜೆಪಿ ಸಂಸದ ಅಜಯ್ ಮಿಶ್ರಾ, ಮತುವಾಸ್ ನಿಂದ ಯಾರೊಬ್ಬರಿಗೂ ಪೌರತ್ವ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ಕಳೆದ ಎರಡು ವರ್ಷಗಳಿಂದ ಸಿಎಎ(ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಗೊಳಿಸುವ ಪ್ರಕ್ರಿಯೆಗೆ ಇದೀಗ ವೇಗ ಪಡೆದುಕೊಂಡಿದೆ. ಇದರಲ್ಲಿನ ಕೆಲವೊಂದು ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಮುಂದಿನ ವರ್ಷದ ಮಾರ್ಚ್ 30ರೊಳಗೆ ಸಿಎಎ ಅಂತಿಮ ಕರಡುಪ್ರತಿ ಸಿದ್ಧವಾಗುವ ನಿರೀಕ್ಷೆ ಇದೆ ಎಂದು ಹೇಳಿರುವುದಾಗಿ ವರದಿಯಾಗಿದೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸಂತನು ಠಾಕೂರ್ ಕೂಡಾ ಉಪಸ್ಥಿತರಿದ್ದರು. 2014ರ ಡಿಸೆಂಬರ್ 31ಕ್ಕಿಂತಲೂ ಮೊದಲು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖ್, ಬೌದ್ಧರು, ಜೈನರು,, ಪಾರ್ಸಿ ನಾಗರಿಕರಿಗೆ ಭಾರತದ ಪೌರತ್ವ ನೀಡುವ ಕಾಯ್ದೆ (ಸಿಎಎ) ಇದಾಗಿದೆ ಎಂದು ವರದಿ ವಿವರಿಸಿದೆ.
ಪಶ್ಚಿಮಬಂಗಾಳದಲ್ಲಿ ಸಾಧ್ಯವಿಲ್ಲ:
ಬಿಜೆಪಿಗೆ ಕೇವಲ ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಮತುವಾಸ್ ಮತ್ತು ಸಿಎಎ ಬಗ್ಗೆ ನೆನಪಾಗುತ್ತದೆ. ಆದರೆ ಕೇಸರಿ ಪಕ್ಷಕ್ಕೆ ಪಶ್ಚಿಮಬಂಗಾಳದಲ್ಲಿ ಸಿಎಎ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಟಿಎಂಸಿ ರಾಜ್ಯಸಭಾ ಸಂಸದ ಸಂತನು ಸೇನ್ ತಿರುಗೇಟು ನೀಡಿರುವುದಾಗಿ ವರದಿ ತಿಳಿಸಿದೆ.