Advertisement

CAA: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ… ಅಮಿತ್ ಶಾ ಖಡಕ್ ಮಾತು

09:53 AM Mar 14, 2024 | Team Udayavani |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಎಂದಿಗೂ ಹಿಂಪಡೆಯುವುದಿಲ್ಲ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.

Advertisement

“ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎಯ ನಿಯಮಗಳನ್ನು ಈ ವಾರದ ಆರಂಭದಲ್ಲಿ ತಿಳಿಸಲಾಯಿತು, ಇದು ವಿರೋಧ ಪಕ್ಷಗಳಿಂದ ಟೀಕೆಗೂ ಗುರಿಯಾಗಿದೆ. ಅಲ್ಲದೆ ವಿರೋಧ ಪಕ್ಷಗಳು ನಮ್ಮ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದೂ ಹೇಳಿಕೊಂಡಿದೆ.

ಒಂದು ಕಡೆ ತಾವು ಅಧಿಕಾರಕ್ಕೆ ಬಂದರೆ ಕಾನೂನನ್ನು ರದ್ದುಪಡಿಸುವ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರು ಹೇಳಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು ವಿರೋಧ ಪಕ್ಷಗಳು ಈ ಭಾರಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೆ ಗೊತ್ತಿದ್ದರೂ ಜನರ ಮನ ಪರಿವರ್ತನೆ ಮಾಡಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಲ್ಲದೆ ಲೋಕ ಸಭಾ ಚುನಾವಣೆಯ ತಯಾರಿ ಆರಂಭವಾದಾಗಿನಿಂದ ಇಂಡಿಯಾ ಮೈತ್ರಿಕೂಟದಲ್ಲಿ ಹಲವು ರಾಜಕೀಯ ಪಕ್ಷಗಳು ಹೊರಬಂದು ಸ್ವತಂತ್ರವಾಗಿ ಸ್ಪರ್ದಿಸುವ ಹೇಳಿಕೆಗಳನ್ನು ನೀಡಿದ್ದು ಇದರಿಂದಲೇ ಅರ್ಥವಾಗುತ್ತೆ ಇಂಡಿಯಾ ಮೈತ್ರಿಕೂಟ ಎಷ್ಟು ದುರ್ಬಲವಾಗಿದೆ ಎಂಬುದು ಎಂದು ಹೇಳಿದ್ದಾರೆ.

ಸಿಎಎ ತಂದಿದ್ದು ಬಿಜೆಪಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಅದನ್ನು ರದ್ದುಗೊಳಿಸುವುದು ಅಸಾಧ್ಯವದ ಮಾತು. ಅದನ್ನು ರದ್ದುಪಡಿಸಲು ಬಯಸುವವರಿಗೆ ಸ್ಥಾನ ಸಿಗದಂತೆ ನಾವು ಇಡೀ ರಾಷ್ಟ್ರದಲ್ಲಿ ಅದರ ಬಗ್ಗೆ ಜಾಗೃತಿ ಮೂಡಿಸುತ್ತೇವೆ, ”ಎಂದು ಶಾ ಹೇಳಿಕೆ ನೀಡಿದ್ದಾರೆ.

Advertisement

ಅಷ್ಟುಮಾತ್ರವಲ್ಲದೆ ವಿವಾದಾತ್ಮಕ ಕಾನೂನಿನ ಮೂಲಕ ಭಾರತೀಯ ಜನತಾ ಪಕ್ಷ ಹೊಸ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಹೇಳಿಕೆ ನೀಡುತ್ತಿರುವ ಪ್ರತಿಪಕ್ಷಗಳ ಆರೋಪಗಳನ್ನು ಶಾ ವ್ಯಂಗ್ಯವಾಡಿದ್ದು ‘ವಿರೋಧ ಪಕ್ಷಕ್ಕೆ ಬೇರೆ ಕೆಲಸವಿಲ್ಲ. ಅವರು ಹೇಳುವುದು ಒಂದು ಮಾಡುವುದು ಇನ್ನೊಂದು ಅವರ ಯಾವ ಹೇಳಿಕೆಗೂ ಆಧಾರವಿಲ್ಲ. ಆದರೆ, ಪ್ರಧಾನಿ ಮೋದಿ ಮತ್ತು ಬಿಜೆಪಿಯ ಇತಿಹಾಸವೇ ಬೇರೆ. ಬಿಜೆಪಿ ಅಥವಾ ಪ್ರಧಾನಿ ಮೋದಿ ಹೇಳುವುದು ಕಲ್ಲಿನಲ್ಲಿ ಕೆತ್ತಿದಂತೆ. ಮೋದಿ ನೀಡಿದ ಪ್ರತಿ ಭರವಸೆಯೂ ಈಡೇರಿದೆ ಎಂದು ಶಾ ಹೇಳಿದರು.

ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಗಳಲ್ಲಿ ರಾಜಕೀಯ ಲಾಭವಿದೆ ಎಂದು ಹೇಳುತ್ತಿರುವ ಪ್ರತಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾ ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಬೇಕಾದರೆ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿ ಮಾಡಲೇ ಬೇಕು ಅದು ಬಿಟ್ಟರೆ ಬೇರೆ ಏನು ಮಾಡಬೇಕು ನೀವೇ ಹೇಳಿ ಎಂದು ಶಾ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Kaup- ಶಿರ್ವ ಮುಖ್ಯರಸ್ತೆ; ರಸ್ತೆಯಲ್ಲಿರುವ ಹೈಟೆನ್ಶನ್‌ ವಿದ್ಯುತ್‌ ಕಂಬಗಳು:ಅಪಾಯದ ಕರೆಗಂಟೆ

Advertisement

Udayavani is now on Telegram. Click here to join our channel and stay updated with the latest news.

Next