Advertisement

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ಯೋಜನೆಗೆ ಸಂಪುಟ ಅಸ್ತು

10:36 PM Dec 23, 2020 | sudhir |

ಹೊಸದಿಲ್ಲಿ: ಪರಿಶಿಷ್ಟ ಜಾತಿ (ಎಸ್‌ಸಿ)ಗೆ ಸೇರಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮೆಟ್ರಿಕ್ಯುಲೇಷನ್‌ ಬಳಿಕದ ವಿದ್ಯಾಭ್ಯಾಸಕ್ಕಾಗಿ 59,048 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.

Advertisement

ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಈ ಸ್ಕಾಲರ್‌ಶಿಪ್‌ ನೀಡಲಾಗುತ್ತದೆ. ಈ ಪೈಕಿ ಕೇಂದ್ರವು 35,534 ಕೋ.ರೂ. ನೀಡಲಿದ್ದು, ಉಳಿದ ಭಾಗವನ್ನು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಭರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ಥಾವರ್‌ಚಂದ್‌ ಗೆಹಲೋಟ್‌ ತಿಳಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಎಸ್‌ಸಿ ಸಮುದಾಯದ 4 ಕೋಟಿ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಈ ಯೋಜನೆ ಜಾರಿಯಿಂದ ಎಸ್‌ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ಯುಲೇಷನ್‌ ಅನಂತರ ಯಾವುದೇ ಕೋರ್ಸ್‌ಗೆ ಸೇರಿಕೊಂಡು ವಿದ್ಯಾರ್ಥಿ ವೇತನ ಪಡೆಯಲು ಅನುಕೂಲವಾಗಲಿದೆ. ನಗದು ನೇರ ವರ್ಗಾವಣೆಯ ಅನ್ವಯ ಫ‌ಲಾನುಭವಿಗಳಿಗೆ ವಿದ್ಯಾರ್ಥಿ ವೇತನ ಸಿಗಲಿದೆ.

ಇದನ್ನೂ ಓದಿ:ಕೋವಿಡ್ ಪರಿಹಾರ ಪ್ಯಾಕೇಜ್‌ ಮಸೂದೆಗೆ ಸಹಿಹಾಕದಿರಲು ಟ್ರಂಪ್ ನಿರ್ಧಾರ‌ 

Advertisement

Udayavani is now on Telegram. Click here to join our channel and stay updated with the latest news.

Next