Advertisement

2019-20ರ ವರೆಗೆ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ

04:57 PM May 02, 2018 | udayavani editorial |

ಹೊಸದಿಲ್ಲಿ : ಆರೋಗ್ಯ ರಕ್ಷಣೆಯ ಮೂಲ ಸೌಕರ್ಯ ವಿಸ್ತರಣೆಗೆ ಮಹತ್ತರ ಉತ್ತೇಜನ ನೀಡುವ ಯತ್ನದಲ್ಲಿ ಕೇಂದ್ರ ಸಚಿವ ಸಂಪುಟ ಇಂದು ಬುಧವಾರ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಯನ್ನು 12ನೇ ಪಂಚವಾರ್ಷಿಕ ಯೋಜನೆಗೂ ಆಚೆಗೆ 2019-20ರ ವರೆಗಿನ ಅವಧಿಗೆ ವಿಸ್ತರಿಸುವುದಕ್ಕೆ ಅನುಮೋದನೆ ನೀಡಿತು.

Advertisement

ಪಿಎಂಎಸ್‌ಎಸ್‌ವೈ ಯೋಜನೆಯು ಕೇಂದ್ರದ ಆರೋಗ್ಯ ಯೋಜನೆಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಜನರಿಗೆ ಕೈಗಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವುದು ಮತ್ತು ಹಿಂದುಳಿದ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ.  

ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರಕಾರ 14,832 ಕೋಟಿ ರೂ.ಗಳನ್ನು ತೆಗೆದಿರಿಸಿದೆ. ಈ ಯೋಜನೆಯಡಿ ಹೊಸ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸಯನ್ಸಸ್‌ ಗಳನ್ನು ಸ್ಥಾಪಿಸಲಾಗುವುದು ಮತ್ತು ಸರಕಾರಿ ವೈದ್ಯಕೀಯ ಮೇಲ್ಮಟ್ಟಕ್ಕೆ ಏರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next