ಹೊಸದಿಲ್ಲಿ: ಸಂಪುಟ ವಿಸ್ತರಣೆ ಕಸರತ್ತಿನಲ್ಲಿ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಾಗೂ ರಾಬರ್ಟ್ ವಾದ್ರಾರನ್ನು ಭೇಟಿಯಾದರು. ಸಚಿವರಾದ ಎಂ.ಬಿ.ಪಾಟೀಲ್, ಜಮೀರ್‌ಅಹ್ಮದ್ ಜತೆಗಿದ್ದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಳೆದೆರಡು ದಿನಗಳಿಂದ ಹೊಸದಿಲ್ಲಿಯಲ್ಲಿ ಸರಣಿ ಸಭೆ ನಡೆಸಿ ನೂತನ ಸಚಿವರ ಪಟ್ಟಿ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಒಂದು ವರದಿಯ ಪ್ರಕಾರ 24 ಮಂದಿ ಶಾಸಕರ ಪಟ್ಟಿ ಅಂತಿಮವಾಗಿದ್ದು, ಸಚಿವರಾಗಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:Bodybuilder; ಚಿನ್ನದ ಪದಕ ವಿಜೇತ ಖ್ಯಾತ ದೇಹದಾರ್ಢ್ಯ ಪಟು ಅರೋರಾ ಹೃದಯ ಸ್ತಂಭನದಿಂದ ಮೃತ್ಯು
Related Articles
ಸಚಿವ ಸಂಪುಟ ರಚನೆ ತಡವಾಗುತ್ತಿಲ್ಲ, ಬದಲಾಗಿ ಎಲ್ಲಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಬೆಂಗಳೂರು ನಗರದಲ್ಲಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ, ಡಿಸಿಎಂ ವರಿಷ್ಠರ ಜೊತೆ ಮಾತನಾಡುತ್ತಿದ್ದಾರೆ. ಅನೇಕ ಊಹಾಪೋಹಗಳ ನಡೆಯುತ್ತಿದೆ. ಅಧಿಕೃತವಾಗಿ ಆಗುವವರೆಗೂ ಕಾಯಬೇಕು ಎಂದರು.
ಸಂಪುಟದಿಂದ ಹಿರಿಯರನ್ನು ಕೈ ಬಿಡುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾಯಕರು ಹೇಳಿಕೆ ಕೊಟ್ಟಿಲ್ಲ. ಹೊರಗಡೆ ಊಹಾಪೋಹಗಳು ನಡೆಯುತ್ತಿದೆ. ಮಾಧ್ಯಮಗಳಲ್ಲಿ ನೋಡಿದ್ದೇವೆ ಅಷ್ಟೆ. ಆದರೆ ಪಕ್ಷದಿಂದ ಈ ಬಗ್ಗೆ ನಮಗೆ ಮಾಹಿತಿ ತಿಳಿದುಬಂದಿಲ್ಲ ಎಂದರು.