Advertisement

One Nation One Election ಕೇಂದ್ರ ಸಚಿವ ಸಂಪುಟ ಅನುಮೋದನೆ : ವರದಿ

04:45 PM Dec 12, 2024 | Team Udayavani |

ಹೊಸದಿಲ್ಲಿ: ಒಂದು ದೇಶ, ಒಂದು ಚುನಾವಣೆ ಪ್ರಕ್ರಿಯೆಗೆ ಕೇಂದ್ರ ಸಚಿವ ಸಂಪುಟ ಗುರುವಾರ(ಡಿ12) ರಂದು ಅನುಮೋದನೆ ನೀಡಿದೆ. ನಡೆಯುತ್ತಿರುವ ಸಂಸತ್ತಿನ  ಚಳಿಗಾಲದ ಅಧಿವೇಶನದಲ್ಲೇ ಸಮಗ್ರ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Advertisement

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರವಾದರೆ, ಅದು ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಲಿದೆ.

2023,ಸೆಪ್ಟೆಂಬರ್ 2 ರಂದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಮಿತಿಯ ಅಧ್ಯಕ್ಷರಾಗಿದ್ದರು. ರಾಜಕೀಯ ಪಕ್ಷಗಳು ಸೇರಿದಂತೆ ವಿವಿಧ ಮಧ್ಯಸ್ಥಗಾರರಿಂದ ಸಲಹೆಗಳು, ದೃಷ್ಟಿಕೋನಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸಿ, ಸಮಿತಿಯು 2024, ಮಾರ್ಚ್ 14 ರಂದು ತನ್ನ ವರದಿಯನ್ನು ಸಲ್ಲಿಸಿತ್ತು. ಸಂಸತ್ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವುದು ಸರಕಾರದ ಉದ್ದೇಶವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next