ನವದೆಹಲಿ: ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ವಿಸ್ತರಣೆ ಆಗಿರುವುದರಿಂದ ಫಲಾನುಭವಿಗಳಿಗೆ ದೊಡ್ಡ ಮಟ್ಟದಲ್ಲಿ ಸಹಾಯವಾಗಲಿದೆ ಹಾಗೂ ಶುದ್ಧ ಅಡುಗೆ ಇಂಧನ ಒದಗಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಡಿ ಇಟ್ಟಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಮ್ ಉತ್ಪನ್ನಗಳ ದರ ಏರಿಕೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಎಲ್ಪಿಜಿ ಸಿಲಿಂಡರ್ಗೆ 200 ರೂ. ಸಬ್ಸಿಡಿಯನ್ನು ಶುಕ್ರವಾರ ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿತ್ತು.
“ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟದ ನಿರ್ಧಾರದಿಂದ 9.6 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.