Advertisement

ವಿಜಯೇಂದ್ರಗೆ ಸಚಿವ ಸ್ಥಾನ, ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ ತಯಾರಿ: ಸಿಎಂ

11:50 PM May 15, 2022 | Team Udayavani |

ಹುಬ್ಬಳ್ಳಿ: ವಿಧಾನ ಪರಿಷತ್‌ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಗೆ ವರಿಷ್ಠರು ಸಮ್ಮತಿ ನೀಡುವ ಸಾಧ್ಯತೆ ಇದೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್‌ ಜತೆ ಚರ್ಚಿಸಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ತಯಾರಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ವಿಧಾನ ಪರಿಷತ್‌ ಹಾಗೂ ರಾಜ್ಯಸಭಾ ಚುನಾವಣೆಯಿದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಈಗಾಗಲೇ ವರಿಷ್ಠರ ಗಮನಕ್ಕೆ ತರಲಾಗಿದೆ. ಪಕ್ಷದ ಕೋರ್‌ ಕಮಿಟಿ ಸಭೆ ಕೂಡ ಮುಗಿದಿದೆ. ಸುಪ್ರೀಂ ಕೊರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇತರ ಚುನಾವಣೆಗಳನ್ನು ನಡೆಸಬೇಕು. ಇವೆಲ್ಲವನ್ನೂ ವರಿಷ್ಠರು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ವಿಸ್ತರಣೆಗೆ ಸೂಚನೆ ನೀಡಬಹುದು. ಇನ್ನೊಂದೆರಡು ದಿನದಲ್ಲಿ ಪುನಃ ವರಿಷ್ಠರೊಂದಿಗೆ ಮಾತನಾಡಿ ಅವರು ನೀಡುವ ಸೂಚನೆ ಮೇರೆಗೆ ಸಂಪುಟ ವಿಸ್ತರಣೆಗೆ ತಯಾರಿ ಮಾಡಿಕೊಳ್ಳಲಾಗುವುದು. ಬಿ.ವೈ. ವಿಜಯೇಂದ್ರ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದರು.

ಅಂಜನಾದ್ರಿಗೆ 100 ಕೋಟಿ ರೂ.
ಹುನುಮನ ಜನ್ಮಸ್ಥಳ ಕೊಪ್ಪಳ ಜಿಲ್ಲೆ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ನೀಡಲಾಗಿದ್ದು, ಈ ವರ್ಷವೇ ಕೆಲಸ ಆರಂಭಿಸಲಾಗುವುದು. ಜತೆಗೆ ಅಲ್ಲಿ ಗಾಳಿ ಗೋಪುರ, ರೋಪ್‌ ವೇ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಳ್ಳುತ್ತಿದ್ದರೆ, ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲೂ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕಾನೂನು ಚೌಕಟ್ಟಿನಡಿ ಸಮಸ್ಯೆ ಇತ್ಯರ್ಥ
ಹಿಜಾಬ್‌, ಆಜಾನ್‌, ಹಲಾಲ್‌ ಕಟ್‌ನಂತಹ ವಿಷಯಗಳನ್ನು ಸೌಹಾರ್ದಯುತವಾಗಿ, ನ್ಯಾಯಯುತ ವಾಗಿ ಬಗೆಹರಿಸಲಾಗಿದೆ. ಎಲ್ಲ ವಿಷಯಗಳನ್ನು ಕಾನೂನು ಚೌಕಟ್ಟಿನಡಿ ಇತ್ಯರ್ಥಗೊಳಿಸಲಾಗಿದೆ. ಜನರಿಗೆ ದಕ್ಷ ಹಾಗೂ ಜನಪರ ಆಡಳಿತ ನೀಡುತ್ತಿದ್ದೇವೆ. ಜನರು ಕೂಡ ಇದನ್ನೇ ಬಯಸುತ್ತಾರೆ. ಸರಕಾರಕ್ಕೆ ಗಂಡಸುತನವಿಲ್ಲ ಎನ್ನುವ ಹೋರಾಟಗಾರರು
ಇದನ್ನು ಅರಿಯಬೇಕು. ಹಳೇ ಮೈಸೂರು ಭಾಗದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next