Advertisement

ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ: ಜೋಶಿ

11:10 PM Jan 15, 2020 | Team Udayavani |

ಹುಬ್ಬಳ್ಳಿ: ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಬೇಕು. ಬೇಡಿಕೆ ಸಲ್ಲಿಸಲು ಪ್ರತಿಯೊಬ್ಬರಿಗೂ ಅವಕಾಶವಿದೆ. ಆದರೆ, ಇಂತವರನ್ನೇ ಮಾಡಬೇಕು ಎಂದು ಬೆದರಿಸುವುದು ಸರಿಯಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಮಾಜದ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಬೇಡಿಕೆ ಸಲ್ಲಿಸಬಹುದು. ಆದರೆ, ಅಂತಿಮವಾಗಿ ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಮುಖ್ಯಮಂತ್ರಿ ಯಾಗಿ ರಾಜ್ಯದ ಆಡಳಿತ ಸೇರಿದಂತೆ ಎಲ್ಲವನ್ನೂ ನಿಭಾಯಿ ಸುವುದು ತುಂಬ ಕಷ್ಟ. ಹೀಗೆಯೇ ಆಗಬೇಕು ಎಂದು ಒತ್ತಡ ಹಾಕುವುದು ಯಾರಿಗೂ ಶೋಭೆಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next