Advertisement

ಸಂಪುಟ ವಿಸ್ತರಣೆ: ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್‌

08:56 PM Aug 19, 2022 | Team Udayavani |

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಹೈಕಮಾಂಡ್‌ ಗೊಂದಲಕ್ಕೆ ಒಳಗಾಗಿದೆ. ವಿಧಾನಸಭೆ ಚುನಾವಣೆ ಹತ್ತಿರ ಇರುವುದರಿಂದ ಈ ಸಂದರ್ಭದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕಾ ಅಥವಾ ಬೇಡವೋ ಎನ್ನುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಈ ಕುರಿತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೆಲವು ಹಿರಿಯ ನಾಯಕರ ಜತೆ ಚರ್ಚಿಸಿದ್ದಾರೆ. ಖಾಲಿಯಿರುವ ಐದು ಸ್ಥಾನಗಳಲ್ಲಿ ಎಲ್ಲವನ್ನೂ ಭರ್ತಿ ಮಾಡಬೇಕಾ ಅಥವಾ ಒಂದನ್ನಾದರೂ ಉಳಿಸಿಕೊಳ್ಳಬೇಕಾ ಎನ್ನುವ ಬಗ್ಗೆಯೂ ನಾಯಕರ ಅಭಿಪ್ರಾಯ ಪಡೆದಿದ್ದಾರೆ. ಸಂಪುಟ ವಿಸ್ತರಣೆಯ ಸಾಧಕ ಬಾಧಕ ನೋಡಿಕೊಂಡು ತೀರ್ಮಾನ ಕೈಗೊಳ್ಳಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಆರೋಪ ಹೊತ್ತು ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್‌ ಜಾರಕಿಹೊಳಿ ಹಾಗೂ ಕೆ.ಎಸ್‌.ಈಶ್ವರಪ್ಪ ಅವರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಆ ಮೂಲಕ ಅವರ ವಿರುದ್ಧ ಕೇಳಿ ಬಂದಿರುವ ಆರೋಪದಿಂದ ಮುಕ್ತರಾಗಿದ್ದಾರೆ ಎನ್ನುವ ಸಂದೇಶ ರವಾನೆ ಮಾಡಬೇಕು ಎನ್ನುವ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.

ಈ ಮಧ್ಯೆ, ಸಿ.ಪಿ. ಯೋಗೇಶ್ವರ್‌ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಒತ್ತಡ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಅದರಿಂದಾಗುವ ಲಾಭ ನಷ್ಟದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಪಡೆಯಲಾಗಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next