ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈ ಕಮಾಂಡ್ ನಾಯಕರು ಕರೆ ಮಾಡಿದ್ದಾರೆ. ವಿಮಾನ ನಿಲ್ದಾಣ ದಾಟಿದ ನಂತರ ಚಾಲಕನನ್ನು ಕೆಳಗಿಳಿಸಿ ಸಿಎಂ ಏಕಾಂಗಿಯಾಗಿ ಕಾರಿನಲ್ಲಿ ಕುಳಿತು ಹೈ ಕಮಾಂಡ್ ನಾಯಕರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
ರಾಘವೇಂದ್ರಗೆ ಮಂತ್ರಿಗಿರಿ?
ಪಕ್ಷದ ಮೂಲಗಳ ಪ್ರಕಾರ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಮುಂದೆ ರಾಜ್ಯದಲ್ಲಿ ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಮತ್ತು ಅವರಿಗೆ ಯಾವ ಸ್ಥಾನ ಮಾನ ನೀಡಲಾಗುತ್ತದೆ ಎನ್ನುವ ಕುರಿತು ಯಡಿಯೂರಪ್ಪ ಅವರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿದೆ ಎನ್ನಲಾಗಿದೆ.
ಯಡಿಯೂರಪ್ಪ ಅವರನ್ನು ಗೌರವಯುತವಾಗಿ ಸಿಎಂ ಸ್ಥಾನದಿಂದ ಕೆಳಗಿಳಿಸಿ, ಅವರಿಗೆ ದಕ್ಷಿಣ ಭಾರತದ ಯಾವುದಾದರೂ ರಾಜ್ಯದ ರಾಜ್ಯಪಾಲರ ಹುದ್ದೆ ನೀಡುವ ಬಗ್ಗೆ ಹೈಕಮಾಂಡ್ ಆಲೋಚನೆ ಹೊಂದಿದೆ ಎಂದು ತಿಳಿದು ಬಂದಿದೆ. ಅಲ್ಲದೇ ಅವರ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಬಗ್ಗೆಯೂ ಹೈಕಮಾಂಡ್ ನಾಯಕರು ಆಲೋಚನೆ ಹೊಂದಿದ್ದಾರೆ ಎನ್ನಲಾಗಿದ್ದು, ಅದನ್ನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ
ದೆಹಲಿಯಲ್ಲಿ ಉಳಿದ ವಿಜಯೇಂದ್ರ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ದೆಹಲಿಯಲ್ಲಿ ಯೇ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಬೆಳಿಗ್ಗೆ.ಸಿಎಂ ಜೊತೆ ದೆಹಲಿಗೆ ತೆರಳಿದ್ದ ವಿಜಯೇಂದ್ರ ದೆಹಲಿಯಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.