Advertisement
ಹೊಸದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಮಹತ್ಚದ ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿವರ್ತಿಸಲು ನಿರಂತರವಾಗಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Related Articles
Advertisement
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಶೇ.70 ರಷ್ಟು ಮಳೆ ಹೆಚ್ಚಾಗಿದೆ. ಹಿಂಗಾರು ಬೆಳೆ ಹಾನಿ 34 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. 83693 ಹೆಕ್ಟೇರ್ ಬೆಳೆ ನಷ್ಟ ಆಗಿದೆ ಎಂದರು.
ಎಸ್ಸಿ, ಎಸ್ಟಿ ಮೀಸಲಾತಿ ಕಾರಣಕ್ಕೆ ಸ್ವಾಮೀಜಿ ಧರಣಿ ಕುಳಿತಿದ್ದರು. ನಮ್ಮ ಸರ್ಕಾರ ಸ್ಪಂದಿಸಿ, ಪರಿಶಿಷ್ಟರ ಮೀಸಲಾತಿಗೆ ಇಚ್ಛಾಶಕ್ತಿ ಇದ್ದಿದ್ದಕ್ಕೆ ಮಾಡಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.