Advertisement
ಇನ್ನೊಂದೆಡೆ, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುದಾನಕ್ಕೆ ಮನವಿ ಸಲ್ಲಿಸುವ ನೆಪದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕರು ನಿಯೋಗದ ಜತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು. ಪ್ರಮುಖವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆ ಭಾರಿ ಚರ್ಚೆಗೆ ಕಾರಣವಾಗಿದೆ.
Related Articles
Advertisement
ನಿಗದಿಯಾಗದ ಭೇಟಿ: ಎರಡು- ಮೂರು ದಿನದಲ್ಲಿ ವರಿಷ್ಠರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಹೇಳಿದ್ದರು. ಆದರೆ ವರಿಷ್ಠರಿಂದ ಪ್ರತಿಕ್ರಿಯೆ ಬಾರದಿರುವುದು ಸಚಿವಾ ಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ. ಹಾಗಾಗಿ ನಿರಂತರವಾಗಿ ಪ್ರತ್ಯೇಕ ಸಭೆಗಳನ್ನು ನಡೆಸುವ ಮೂಲಕ ಸಂಪುಟ ಸರ್ಜರಿಗೆ ಒತ್ತಡ ಹೇರಲು ಮುಂದಾದಂತಿದೆ.
ಇನ್ನೂ ಕೆಲ ಆಕಾಂಕ್ಷಿಗಳು ದೀಪಾವಳಿ ಬಳಿಕ ದೆಹಲಿಗೆ ತೆರಳಿ ಸ್ಥಾನಮಾನಕ್ಕಾಗಿ ಲಾಬಿ ನಡೆಸಲು ಚಿಂತಿಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ದಿನ ಕಳೆದಂತೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ವಿಳಂಬವಾದಷ್ಟು ಕಗ್ಗಂಟಾಗುವ ಲಕ್ಷಣ ಕಾಣುತ್ತಿದೆ.