Advertisement

ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: ಸಿ.ಟಿ.ರವಿ

11:39 PM Dec 11, 2019 | Team Udayavani |

ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವಾಗ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳಿಗಿರುವ ಪರಮಾಧಿಕಾರ. ಅವರು ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಪಕ್ಷ ಹಾಗೂ ರಾಜ್ಯಕ್ಕೆ ಯಾರಿಂದ ಉಪಯೋಗವಾಗುತ್ತದೆಯೋ ಅವರನ್ನು ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಯಾವುದೇ ಸರ್ಕಾರವಿದ್ದರೂ ಅವರು ಆ ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ಯಡಿಯೂರಪ್ಪನವರು ಅತ್ಯಂತ ಅನುಭವಿಗಳಾಗಿದ್ದು, ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

“ನಿಮ್ಮಿಂದ ಯಾವ ಖಾತೆ ಹಿಂಪಡೆಯಬಹುದು’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನವನ್ನೇ ಕೇಳಿರಲಿಲ್ಲ. ಆದರೂ ಕೊಟ್ಟಿದ್ದಾರೆ. ಯಾವ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ. ಯಾರಿಗೆ, ಯಾವ ಖಾತೆ ಕೊಡಬೇಕೆಂಬುದು ಸಹ ಸಿಎಂಗೆ ಬಿಟ್ಟ ವಿಚಾರ. ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next