ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ 26 ದಿನ ಕಳೆದ ಬಳಿಕ ಇಂದು ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಇಂದು 10.30ರಿಂದ 11.30ರವರೆಗೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗಧಿಯಾಗಿದ್ದು, ರಾಜಭವನದಲ್ಲಿ ಚಟುವಟಿಕೆಗಳು ಗರಿಗೆದರಿದೆ.
ಬಿಎಸ್ ವೈ ಸಂಪುಟಕ್ಕೆ ಮೊದಲ ಹಂತದಲ್ಲಿ 17 ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಇಂದು ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.
ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್. ಅಶೋಕ್, ಸಿ.ಟಿ.ರವಿ, ಡಾ.ಸಿ.ಎನ್. ಅಶ್ವತ್ಥ ನಾರಾಯಣ, ವಿ.ಸೋಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಸುರೇಶ್ ಕುಮಾರ್ , ಬಸವರಾಜು ಬೊಮ್ಮಾಯಿ, ಪ್ರಭು ಚವ್ಹಾಣ್, ಶಶಿಕಲಾ ಜೊಲ್ಲೆ, ಎಚ್. ನಾಗೇಶ್. ಸಿ .ಸಿ ಪಾಟೀಲ್, ಜೆ.ಸಿ ಮಾಧು ಸ್ವಾಮಿ ಅವರು ಇಂದು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿಯ ಎಲ್ಲಾ ಶಾಸಕರು ರಾಜಭವನದತ್ತ ಆಗಮಿಸುತ್ತಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಕೂಡಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಆದರೆ ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿದ್ದು. ರಾಜಭವನ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇರುವ ಕಾರಣ ರಾಜಭವನದ ಸಮೀಪದ ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ.