Advertisement
ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ತಿಂಗಳ ಅಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳಲಿದ್ದಾರೆ. ಒಂದು ಮೂಲದ ಪ್ರಕಾರ ಗುರುವಾರ ಇಲ್ಲವೇ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗುವ ಸಾಧ್ಯತೆ ಇದೆ. ಇಲ್ಲವಾದರೆ ನವರಾತ್ರಿ ಬಳಿಕ ಮುಹೂರ್ತ ಕೂಡಿ ಬರಲಿದೆ.
Related Articles
Advertisement
ಮತ್ತೊಂದೆಡೆ ಬಿಜೆಪಿ ಕೇಂದ್ರ ನಾಯಕರು ಕೂಡ ಸಂಪುಟ ವಿಸ್ತರಣೆಗೆ ಉತ್ಸುಕರಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದರು. ರಮೇಶ್ ಜಾರಕಿಹೊಳಿ ಮತ್ತು ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದು, ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಹೀಗಾಗಿ ಬೊಮ್ಮಾಯಿ ಅವರು ತಮ್ಮ ಹಿಂದಿನ ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಗಳೊಂದಿಗೆ ಹಲವಾರು ಮಹತ್ವದ ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ಅರಣ್ಯ ಖಾತೆ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಗಳನ್ನು ಸಿಎಂ ಬೊಮ್ಮಾಯಿ ಅವರೇ ಹೊಂದಿದ್ದಾರೆ.
ಇದನ್ನೂ ಓದಿ:ಕೇರಳ ಭಯೋತ್ಪಾದನೆಯ ಅಡಗುತಾಣವಾಗುತ್ತಿದೆ: ಸಿಎಂ ಪಿಣರಾಯಿ ವಿರುದ್ಧ ನಡ್ಡಾ ಆಕ್ರೋಶ
ಬಸವರಾಜ ಬೊಮ್ಮಾಯಿ ಅವರ ಮೇಲಿನ ಹೆಚ್ಚುವರಿ ಕೆಲಸಗಳನ್ನು ಪಕ್ಷದ ಹೈಕಮಾಂಡ್ ಕೂಡ ಗಮನಿಸುತ್ತಿದೆ. ಅಧಿವೇಶನ ಮುಗಿಯುವುದನ್ನೇ ಕಾಯುತ್ತಿದ್ದ ಸಿಎಂ ಈ ವಾರ ಅವರು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಬಿಬಿಎಂಪಿ ಚುನಾವಣೆ ಘೋಷಣೆಯಾದರೆ, ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಸಿಎಂ ರಾಜ್ಯ ರಾಜಧಾನಿಯತ್ತಲೂ ಗಮನ ಹರಿಸಬೇಕಾಗಿದೆ. ಆದರೆ ಬಿಬಿಎಂಪಿ ಚುನಾವಣೆಗೆ ದಿನಾಂಕ ಅಂತಿಮಗೊಂಡಿಲ್ಲ. ದೆಹಲಿಯ ಪಕ್ಷದ ನಾಯಕರ ಒಪ್ಪಿಗೆಗಾಗಿ ಸಿಎಂ ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.