ಧಾರವಾಡ : ಕೇಂದ್ರ ಮಂತ್ರಿ ಮಂಡಲದ ವಿಸ್ತರಣೆ ಅಥವಾ ಪುನಾರಚನೆ ಪ್ರಧಾನಿ ನರೇಂದ್ರ ಮೋದಿ ಅವರ ಪರಮಾಧಿಕಾರವಾಗಿದ್ದು ಈ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಕೆಲವು ಸಚಿವರನ್ನು ಕೈ ಬಿಟ್ಟು ಕೆಲವು ಹೊಸಬರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಮಂತ್ರಿ ಮಂಡಲ ವಿಸ್ತರಣೆ ಅಥವಾ ಪುನಾರಚನೆ ಕುರಿತು ನಮಗೆನು ಗೊತ್ತಿಲ್ಲ. ಪ್ರಧಾನಿಗಳು ಈ ಕುರಿತು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಇದನ್ನೂ ಓದಿ:ವದಂತಿಗಳಿಗೆ ಕಿವಿಗೊಡಬೇಡಿ, ಹಿಂಜರಿಕೆ ಬಿಟ್ಟು ಲಸಿಕೆ ಪಡೆಯಿರಿ: ಪ್ರಧಾನಿ ಮೋದಿ
ಸುತ್ತೂರು ಮಠಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡುವುದನ್ನು ರಾಜಕೀಯ ಎನ್ನಲಾಗದು. ಹಾಗೆಯೇ ಸಚಿವ ಯೋಗೇಶ್ವರ ಅವರು ಬರೆದ ಪರೀಕ್ಷೆಗೆ ಬಿಜೆಪಿ ವಿವಿಯ ಕುಲಪತಿಗಳು ಫಲಿತಾಂಶ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
ಪೆಟ್ರೋಲ್ ಬೆಲೆ ಹೆಚ್ಚಳ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಜೋಶಿ, ಬೆಲೆ ಇಳಿಕೆ ಕುರಿತು ಉತ್ತಮ ನಿರ್ಧಾರ ಕೈಗೊಳ್ಳುವವುದಾಗಿ ತಿಳಿಸಿದರು