Advertisement
ತಿಮ್ಮಾಪುರ ವಿರುದ್ಧದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರುವ ಪ್ರತಿಪಕ್ಷ ಬಿಜೆಪಿ ಅವರ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದೆ. ಜೊತೆಗೆ ರಾಜ್ಯ ಪಾಲರಿಗೂ ದೂರು ನೀಡಲು ಮುಂದಾಗಿರುವುದರಿಂದ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಕಾಂಗ್ರೆಸ್ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ. ಎಂಟು ಮಂದಿ ವಿಧಾನಪರಿಷತ್ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಬಿಜೆಪಿಯ ವರು ದೂರು ನೀಡಿದರೆ, ಸಂಪುಟ ವಿಸ್ತರಣೆಗೆ ಮತ್ತೆ ಗೃಹಣ ಹಿಡಿ ಯುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತೀರ್ಮಾನ ಮಾಡಿದಂತೆ ತಿಮ್ಮಾಪುರ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ. ಅವರ ವಿರುದ್ಧದ ಆರೋಪ ವನ್ನು ಚುನಾವಣಾ ಆಯೋಗ ನೋಡಿಕೊಳ್ಳುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ರಾಜ್ಯಪಾಲ ವಜುಭಾಯಿವಾಲ ಗುಜರಾತ್ ಪ್ರವಾಸದಲ್ಲಿದ್ದು, ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಆಗಮಿಸಿದ ತಕ್ಷಣ ಸಂಪುಟ ವಿಸ್ತರಣೆಗೆ ಸಮಯವಕಾಶ ಕೋರಲಾಗುವುದು ಎಂದು ತಿಳಿದು ಬಂದಿದೆ. ಆರ್.ಬಿ. ತಿಮ್ಮಾಪುರಗೆ ಸ್ಥಾನ ತಪ್ಪಿದರೆ ವಿಧಾನ ಪರಿಷತ್ ಸದಸ್ಯೆ ಮೋಟಮ್ಮಗೆ ಅವಕಾಶ ದೊರೆತರೂ ಆಶ್ಚರ್ಯವಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.
ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ