Advertisement

ಪಿತೃಪಕ್ಷ ನಂತರ ಸಂಪುಟ ವಿಸ್ತರಣೆ

06:45 AM Oct 02, 2018 | |

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗುತ್ತಿದ್ದು ಪಿತೃಪಕ್ಷ ಮುಗಿದ ನಂತರ ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತೀರ್ಮಾನಿಸಿದೆ.

Advertisement

ಮೈಸೂರಿನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಅ.5 ರ ನಂತರ ಸಂಪುಟ ವಿಸ್ತರಣೆಗೆ ಪ್ರಕ್ರಿಯೆ
ಆರಂಭವಾಗಲಿದೆ ಎಂದು ಹೇಳಿದ್ದ ಬೆನ್ನಲ್ಲೇ ಸೋಮವಾರ ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿಯವರು ಸಂಪುಟ ವಿಸ್ತರಣೆಯ ಸುಳಿವು ನೀಡಿದ್ದಾರೆ.

ಅ. 10 ಅಥವಾ 12ರಂದು ಸಂಪುಟ ವಿಸ್ತರಣೆಯಾಗಲಿದೆ. ಸಂಪುಟ ವಿಸ್ತರಣೆಗೆ ಬೇಕಾದ ಸಿದ್ಧತೆ ಮಾಡಿಕೊಂಡಿದ್ದೇವೆ,
ಮಿತ್ರಪಕ್ಷವಾದ ಕಾಂಗ್ರೆಸ್‌ ನಾಯಕರೊಂದಿಗೂ ಮಾತಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. 

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟದಲ್ಲಿ ಕಾಂಗ್ರೆಸ್‌ನ 6 ಹಾಗೂ ಜೆಡಿಎಸ್‌ನ 1 ಸ್ಥಾನ ಸಹಿತ ಏಳು ಸ್ಥಾನಗಳನ್ನು ಭರ್ತಿ ಮಾಡಲಿದ್ದೇವೆ. ಸಮನ್ವಯ ಸಮಿತಿಯ ನಿರ್ಧಾರದಂತೆ ಸೆಪ್ಟೆಂಬರ್‌ ಅಂತ್ಯದೊಳಗೆ ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶ ಪ್ರವಾಸಕ್ಕೆ ತೆರಳಿದ್ದರಿಂದ ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದರು.

ಹೋರಾಟಗಾರರ ಪ್ರಕರಣ ವಾಪಸ್‌?
ಮಹದಾಯಿ ನದಿ ನೀರಿಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಹೋರಾಟದಲ್ಲಿ ಪಾಲ್ಗೊಂಡ ರೈತರ ವಿರುದ್ಧ  ದಾಖಲಾಗಿದ್ದ ಬಾಕಿ ಪ್ರಕರಣಗಳನ್ನು ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. 

Advertisement

ಮಹದಾಯಿ ನದಿ ನೀರಿಗಾಗಿ ಧಾರವಾಡ ಹಾಗೂ ಗದಗ ಜಿಲ್ಲೆಗಳ ರೈತರು ನಡೆಸಿದ ಹೋರಾಟದ ಸಂದಂರ್ಭದಲ್ಲಿ ರೈತರ ವಿರುದ್ಧ 66 ಪ್ರಕರಣಗಳನ್ನು ದಾಖಲಿಸಲಾಗಿತ್ತು ಹಿಂದಿನ ಸಿದ್ದರಾಮಯ್ಯ ಸರ್ಕಾರ 60 ರೈತರ ವಿರುದ್ಧ ಪ್ರಕರಣಗಳನ್ನು ವಾಪಸ್‌ ತೆಗೆದುಕೊಂಡಿದ್ದು, ಆರು ರೈತರ ವಿರುದ್ಧದ ಪ್ರಕರಣಗಳಲ್ಲಿ ಮೂವರ ವಿರುದಟಛಿ ಕೇಂದ್ರ ಸರ್ಕಾರದ ಕಚೇರಿಗಳ ಹಾನಿ, ಸಂಸದರ ಮನೆ ಮೇಲೆ ದಾಳಿ ಪ್ರಕರಣ ದಾಖಲಾಗಿವೆ. ಹೀಗಾಗಿ ಆರು ಪ್ರಕರಣ ಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಮೂರು ಪ್ರಕರಣಗಳನ್ನು ವಾಪಸ್‌ ಪಡೆಯಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ನ. 1ರಂದು ಸರ್ಕಾರ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next