ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಮೈತ್ರಿ ಪಕ್ಷದಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ಆರಂಭವಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ, ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟ ವಿಸ್ತರಣೆಗೆ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆಎಂದು ತಿಳಿದು ಬಂದಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಚರ್ಚಿಸಿ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಧರ್ಭದಲ್ಲಿ ಮಾತನಾಡಿರುವ ದೇವೇ ಗೌಡರು, ಸಂಪುಟ ವಿಸ್ತರಣೆಗೆ ವಿಳಂಬ ಮಾಡುವುದಿಲ್ಲ. ಮುಖ್ಯಮಂತ್ರಿಕುಮಾರಸ್ವಾಮಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಚರ್ಚಿಸಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ದೇವೇಗೌಡರ ಭೇಟಿ ನಂತರ ಮಾತನಾಡಿದ ಕೆ.ಸಿ. ವೇಣುಗೋಪಾಲ್, ಉಪ ಚುನಾವಣೆಯಲ್ಲ ಮೈತ್ರಿ ಅಮೋಘ ಸಾಧನೆ ಮಾಡಿದೆ.ಮುಂದಿನ ದಿನ ಗಳಲ್ಲಿ ಇದು ಮುಂದುವರೆಯಲಿದೆ. ಲೋಕಸಭಾ ಚುನಾ ವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಇದೆ.