Advertisement

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

09:17 PM Nov 20, 2024 | Team Udayavani |

ಬೆಳಗಾವಿ: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಸ್ಪಷ್ಟಪಡಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಸಂಪುಟ ವಿಸ್ತರಣೆ ಆಗಲಿ, ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇಂಥ ಚರ್ಚೆಗೆ ಯಾವುದೇ ರೀತಿಯ ಸ್ಪಂದನೆ ಸಿಗುವುದಿಲ್ಲ. ಸದ್ಯದಲ್ಲಿ ಆ ತರಹದ ಚಿಂತನೆಯೇ ಪಕ್ಷದಲ್ಲಿ ಇಲ್ಲ. ಪಕ್ಷದಲ್ಲಿ ಸಮರ್ಥರು, ಅಸಮರ್ಥರು ಎಂಬುದಿಲ್ಲ. ಕಾಂಗ್ರೆಸ್‌ನ ಎಲ್ಲ 136 ಶಾಸಕರೂ ಸಮರ್ಥರಿದ್ದಾರೆ.

ಯಾರಿಗೆ ಅವಕಾಶ ನೀಡಬೇಕು, ಯಾರಿಗೆ ನೀಡಬಾರದು ಎಂಬುದನ್ನು ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಪಕ್ಷದ ಎಲ್ಲ ಮುಖಂಡರು ಹೈಕಮಾಂಡ್‌ ನಿರ್ಣಯಕ್ಕೆ ಬದ್ಧರಾಗಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next