Advertisement

ಮತಾಂತರ ವಿರೋಧಿ ಮಸೂದೆ ಮುಂದಿನ ಅಧಿವೇಶನದಲ್ಲಿ ಮಂಡನೆ

06:16 PM May 12, 2022 | Team Udayavani |

ಬೆಂಗಳೂರು : ಮತಾಂತರ ವಿರೋಧಿ ಮಸೂದೆಗೆ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು, ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಹೇಳಿದ್ದಾರೆ.

Advertisement

ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಈ ಕ್ರಮವನ್ನು ಜಾರಿಗೆ ತರಲಿದೆ ಎಂದು ಹೇಳಿದರು.

ಇದನ್ನೂ ಓದಿ : ಅತಿಕ್ರಮಣ ತೆರವಿನ ವಿರುದ್ಧ ಭಾರಿ ಪ್ರತಿಭಟನೆ : ದೆಹಲಿ ಆಪ್ ಶಾಸಕ ಬಂಧನ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಗೃಹ ಇಲಾಖೆ ಕರಡು ಟಿಪ್ಪಣಿಯನ್ನು ರೂಪಿಸಿದೆ ಎಂದು  ವರದಿಯಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕರ್ನಾಟಕ ರಕ್ಷಣೆ ಮಸೂದೆಯನ್ನು ಸುಗ್ರೀವಾಜ್ಞೆಯ ಮಾರ್ಗದ ಮೂಲಕ ಜಾರಿಗೆ ತರಲು ಸರಕಾರ ನಿರ್ಧರಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದರೆ, ವಿಧಾನ ಪರಿಷತ್ತಿನಲ್ಲಿ ಅದರ ಅಂಗೀಕಾರ ಬಾಕಿ ಉಳಿದಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next