Advertisement

Priyank Kharge ಬೆಂಬಲಕ್ಕೆ ಸಂಪುಟ ; ಬಿಜೆಪಿಗೆ ತಿರುಗೇಟು ನೀಡಲು ಸಿಎಂ ಸೂಚನೆ

12:46 AM Jan 03, 2025 | Team Udayavani |

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಬೆಂಬಲಕ್ಕೆ ನಿಲ್ಲಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಬಿಜೆಪಿ ನಾಯಕರ ವಿರುದ್ಧ ಇರುವ ಪ್ರಕರಣಗಳನ್ನು ಮತ್ತೆ ಜನರಿಗೆ ಹಂಚಿ ಎಂಬ ನಿರ್ದೇಶನ ನೀಡಲಾಗಿದೆ.

Advertisement

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ. ಇಡೀ ವಿದ್ಯಮಾನಕ್ಕೆ ಸಂಬಂ ಧಿಸಿ ಸಿದ್ದರಾಮಯ್ಯ ಅವರು ಸಚಿವ ಪ್ರಿಯಾಂಕ್‌ಖರ್ಗೆ ಅವರಿಂದ ವಿವರಣೆ ಪಡೆದುಕೊಂಡಿದ್ದಾರೆ. ಇದರಲ್ಲಿ ತಮ್ಮ ಪಾತ್ರ ಏನೇನೂ ಇಲ್ಲ ಎಂದು ಪ್ರಿಯಾಂಕ್‌ ಅವರು ಸಂಪುಟ ಸಹೋದ್ಯೋಗಿಗಳ ಎದುರು ವಿವರಣೆ ನೀಡಿದ್ದಾರೆ.

ಬಿಜೆಪಿಗರ ಪ್ರಕರಣ ಹರಿಬಿಡಲು ಸೂಚನೆ
ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿರುವ ಬಿಜೆಪಿಗೆ ತಿರುಗೇಟು
ನೀಡಲು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಸೂಚನೆ ನೀಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಯಾವ ಯಾವ ಪ್ರಕರಣಗಳು ಇವೆ ಎಂಬುದರ ಬಗ್ಗೆ ಮಾಹಿತಿ ಪಡೆದು ಅದನ್ನು ಜನರಿಗೆ ತಿಳಿಸಿ ಎಂದು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಹಿಂದಿನ ಬಿಜೆಪಿ ಸರಕಾರದ ಹಗರಣಗಳ ಪಟ್ಟಿಯನ್ನು ಕಾಂಗ್ರೆಸ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next