Advertisement

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಪುಟ ಸಭೆ ಒಪ್ಪಿಗೆ

07:30 PM Jul 01, 2022 | Team Udayavani |

ಬೆಂಗಳೂರು : ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ  ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ.

Advertisement

ಇದರಿಂದ ದಶಕಗಳಿಂದ ನಡೆಯುತ್ತಿದ್ದ ಹಿಂದೂ ಸಮುದಾಯದ ಬೇಡಿಕೆ ಈಡೇರಿದಂತಾಗಿದೆ. ಸಿದದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ದತ್ತಪೀಠ ವಿವಾದ ಇನ್ನೊಂದು‌ ಮಜಲಿಗೆ ಹೊರಳಿತ್ತು. ಈ ಸಂಬಂಧ ರಚಿಸಿದ್ದ ಸಮಿತಿ ಹಿಂದೂ ಅರ್ಚಕರ ನೇಮಕ ಕ್ಕೆ ಅವಕಾಶ ನೀಡಿರಲಿಲ್ಲ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದಕ್ಕೆ ಸಂಬಂಧಪಟ್ಟಂತೆ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಿತ್ತು. ಸುದೀರ್ಘ ಚರ್ಚೆಯ ಬಳಿಕ ಸಂಪುಟ ಉಪಸಮಿತಿ ತನ್ನ ವರದಿ ನೀಡಿದೆ.

ಸಂಪುಟ ಉಪಸಮಿತಿ ವರದಿಯನ್ನು ಸರಕಾರ ಒಪ್ಪಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮೆಲ್ಲರ ಬಹು ವರ್ಷಗಳ ಹೋರಾಟಕ್ಕೆ ಇಂದು ಫಲ ಲಭಿಸಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next