Advertisement
ಸಿಎಂ ಸಿದ್ದರಾಮಯ್ಯನವರೇ ಖುದ್ದಾಗಿ ಈ ವರದಿ ವಿಚಾರವನ್ನು ಸಂಪುಟ ಸಭೆಯಲ್ಲಿ ಪ್ರಸ್ತಾವಿಸಿದರು. ಒಟ್ಟು 6 ಸಂಪುಟದಲ್ಲಿ ವರದಿ ಸಲ್ಲಿಕೆಯಾಗಿದ್ದು, ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಸಾಕಷ್ಟು ಅಧ್ಯಯನ ನಡೆಸಬೇಕಿದೆ. ಹೀಗಾಗಿ ವಿಶ್ಲೇಷಣೆ ಮಾಡಿ ಮುಂದಿನ ಹೆಜ್ಜೆ ಇಡಲು ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Related Articles
ವರದಿಯಲ್ಲಿ ಡಾ| ಕೆ. ಸುಧಾಕರ್ ಸೇರಿ ಯಾವುದಾದರೂ ನಿರ್ದಿಷ್ಟ ವ್ಯಕ್ತಿಯ ಬಗ್ಗೆ ಉಲ್ಲೇಖವಿದೆಯೇ ಎಂಬ ಪ್ರಶ್ನೆಗೆ, ಆ ಬಗ್ಗೆ ನನ್ನ ಬಳಿ ಸದ್ಯಕ್ಕೆ ಮಾಹಿತಿ ಇಲ್ಲ. ವರದಿಯಲ್ಲಿ ಉಲ್ಲೇಖೀಸಲಾಗಿದೆಯೋ ಇಲ್ಲವೋ ಎಂಬುದು ಗೊತ್ತಿಲ್ಲ. ಅಧಿಕಾರಿಗಳು ವಿಶ್ಲೇಷಣ ವರದಿ ನೀಡಿದ ಬಳಿಕ ಗೊತ್ತಾಗುತ್ತದೆ. ಈ ಬಗ್ಗೆ ಸರಕಾರ ಮಗುಮ್ಮಾಗಿ ಇರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ಪಡಿತರದಾರರಿಗೆ ಫುಡ್ ಕಿಟ್ ವಿತರಣೆ ಇಲ್ಲ: ನಗದೇ ಗ್ಯಾರಂಟಿಬೆಂಗಳೂರು: ಸಾರ್ವಜನಿಕ ವಿತರಣೆ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ (ಡಿಬಿಟಿ) ಪದ್ಧತಿಯನ್ನು ಮುಂದುವರಿಸುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಬಿಟಿ ಬದಲು ಆಹಾರ ಕಿಟ್ ವಿತರಿಸುವ ಬಗ್ಗೆ ನಿರ್ಣಯ ಕೈಗೊಳ್ಳುವ ವಿಚಾರ ಸಂಪುಟದ ಕಾರ್ಯಸೂಚಿಯಲ್ಲಿ ಉಲ್ಲೇಖವಾಗಿತ್ತು. ಆದರೆ ವಿಸ್ತೃತ ಚರ್ಚೆಯ ಬಳಿಕ ಫಲಾನುಭವಿಗಳಿಗೆ ಡಿಬಿಟಿ ಮುಂದುವರಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಈ ಸಂಬಂಧ ಮೂರು ಪ್ರಸ್ತಾವ ಮಂಡಿಸಿತ್ತು.