ಬೆಂಗಳೂರು: ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಪ್ರಮುಖವಾಗಿ ಮುಂದಿನ ವಾರ ಆರಂಭವಾಗಲಿರುವ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಂಡನೆ ಮಾಡಲಿರುವ ವಿಧೇಯಕಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಪ್ರಮುಖವಾಗಿ 2011ರ 362 ಗೆಜೆಟ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯನ್ನು ಸಕ್ರಮಗೊಳಿಸುವ ಕುರಿತು ರಾಜ್ಯ ಸರ್ಕಾರ ವಿಶೇಷ ನೇಮಕ ವಿಧೇಯಕ ಮಂಡನೆಗೆ ಮುಂದಾಗಿದೆ ಎಂದು ತಿಳಿದು ಬಂದಿದ್ದು, ಆ ಹಿನ್ನೆಲೆಯಲ್ಲಿ ಬುಧವಾರ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಧಿವೇಶನದಲ್ಲಿ ಮಂಡನೆಗೆ ತೀರ್ಮಾನಿಸುವ ಸಾಧ್ಯತೆ ಇದೆ.
ಇದರ ಜೊತೆಗೆ ರಾಜ್ಯದ ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲಿನ ವಿಷಯದ ಕುರಿತಂತೆಯೂ ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದ್ದು, ರಾಜ್ಯದ ಹೈಕೋರ್ಟ್ ತೀರ್ಪು ನೀಡಿದ ನಂತರ ಸರ್ಕಾರ ನಡೆದುಕೊಳ್ಳಬೇಕೆನ್ನುವ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಅಲ್ಲದೆ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಸೋಂಕಿನ ಸಂಖ್ಯೆ ಶೇ. 5.1ಕ್ಕೆ ಇಳಿಕೆ : ರಾಜ್ಯಾದ್ಯಂತ 4,452 ಮಂದಿಗೆ ಪಾಸಿಟಿವ್
ಅಲ್ಲದೇ ಬೀದರ್‌ನ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣದ ಪತ್ರಿಕೆಗೆ ಅನುಮೋದನೆ ನೀಡುವುದು.
ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಒದಗಿಸುವ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡುವ ಸಾಧ್ಯತೆ ಇದೆ.