Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸೆ.17ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖೆವಾರು ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಿ ನೀಲನಕ್ಷೆ ತಯಾರಿಸುವ ಬಗ್ಗೆಯೂ ನಿರ್ಧರಿಸಲಾಗುವುದು.
Related Articles
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, 2013-18ರ ಅವ ಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13 ಸಾವಿರ ಶಿಕ್ಷಕರು ಸೇರಿದಂತೆ 30 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವ ಧಿಯಲ್ಲಿ 6,500 ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು. ನಂತರ ಎರಡು ವರ್ಷದ ಅವ ಧಿಯಲ್ಲಿ 25 ಸಾವಿರ ಹುದ್ದೆ ತುಂಬಲಾಗುವುದು ಎಂದರು.
Advertisement
ನಮ್ಮ ಸರ್ಕಾರದ ಅವಧಿ ಮುಗಿಯುವುದರೊಳಗೆ 50 ಸಾವಿರ ಖಾಲಿ ಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು ಅದಕ್ಕೆ ಬದ್ಧವಾಗಿದ್ದೇವೆ. ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕಾರಾತ್ಮಕ ರಾಜಕೀಯ ಮಾಡದೇ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದರು.
ಎಂಎಲ್‌ಸಿ ಜಗದೇವ ಗುತ್ತೇದಾರ, ಜಿಡಿಎ ಅಧ್ಯಕ್ಷ ಮಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಡಾ| ಶರಣಪ್ಪ ಸೇರಿದಂತೆ ಇತರರಿದ್ದರು.
ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತೀಕರಣ ಮಾಡಲಾಗುವುದು. ಕಲಬುರಗಿ ಹಾಗೂ ಬೀದರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ.-ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ