Advertisement

ಮಹಾ ಸಂಪುಟ ವಿಸ್ತರಣೆ: ಅಜತ್ ಪವಾರ್ ಡಿಸಿಎಂ, ಸಚಿವರಾಗಿ ಆದಿತ್ಯ ಠಾಕ್ರೆ- ಅಶೋಕ್ ಚವಾಣ್

09:55 AM Dec 31, 2019 | keerthan |

ಮುಂಬೈ: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಸರಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಎನ್ ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ- ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಇಂದು 36 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. (26 ಸಂಪುಟ ದರ್ಜೆ ಮತ್ತು 10 ಮಂದಿ ರಾಜ್ಯ ಸಚಿವರು)

ಸಿಎಂ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ, ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್, ದಿಲೀಪ್ ವಾಲ್ಸೆ ಪಾಟೀಲ್, ಧನಂಜಯ್ ಮುಂಡೆ, ವಿಜಯ್ ವಡೆತ್ತಿವಾರ್ ಮುಂತಾದವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ ನಲ್ಲಿ ನಡೆದ ಧಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿದ್ದರು. ಆದರೆ ಎನ್ ಸಿಪಿ ಬೆಂಬಲ ದೊರೆಯದ ಹಿನ್ನಲೆ ಆ ಸರ್ಕಾರ ಬಿದ್ದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next