Advertisement

ಲೋಕಸಭೆಯಲ್ಲಿ ಆಂಗ್ಲೋ-ಇಂಡಿಯನ್ ಮೀಸಲು ರದ್ದು; ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧಾರ

09:56 AM Dec 06, 2019 | Nagendra Trasi |

ನವದೆಹಲಿ:ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಇನ್ನೂ ಹತ್ತು ವರ್ಷಗಳ ಕಾಲ ವಿಸ್ತರಿಸುವ ಮಹತ್ವದ ನಿರ್ಣಯಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಆಂಗ್ಲೋ-ಇಂಡಿಯನ್ ಸಮುದಾಯದ ಸದಸ್ಯರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲು ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.

Advertisement

ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆಂಗ್ಲೋ ಇಂಡಿಯನ್ ಸಮುದಾದಯ ಮೀಸಲಾತಿ ಅವಧಿ 2020ರ ಜನವರಿ 25ರಂದು ಮುಕ್ತಾಯಗೊಳ್ಳಲಿದೆ.

ಕಾನೂನಿನ ಪ್ರಕಾರ 543ರ ಸದಸ್ಯ ಬಲದ ಲೋಕಸಭೆಯಲ್ಲಿ 84 ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ, 47 ಸ್ಥಾನ ಪರಿಶಿಷ್ಟ ಪಂಗಡಕ್ಕೆ. ಹೆಚ್ಚುವರಿಯಾಗಿ ಸರ್ಕಾರ ಆಂಗ್ಲೋ ಇಂಡಿಯನ್ ಸಮುದಾಯದ ಇಬ್ಬರು ಸದಸ್ಯರನ್ನು ನೇಮಕ ಮಾಡುತ್ತದೆ. ಹೀಗೆ ಲೋಕಸಭೆಯ ಸದಸ್ಯರ ಒಟ್ಟು ಬಲ 545.

ಪ್ರಧಾನಿ ನರೇಂದ್ರ ಮೋದಿ ನೇತೃದ ಮೊದಲ ಅವಧಿಯಲ್ಲಿ ಇಬ್ಬರು ಆಂಗ್ಲೋ ಇಂಡಿಯನ್ ಸಮುದಾಯದ ಸದಸ್ಯರನ್ನು ಲೋಕಸಭೆಗೆ ನೇಮಕ ಮಾಡಿತ್ತು. ಆದರೆ ಎರಡನೇ ಅವಧಿಯಲ್ಲಿ ಯಾವುದೇ ಸದಸ್ಯರನ್ನು ನಾಮನಿರ್ದೇಶನ ಮಾಡಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next