ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಈ ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನ ಮಾನ
ದೊರೆಯುವುದು ಅನುಮಾನ.
ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬೇಕು ಎಂಬುದು ಕಾಂಗ್ರೆಸ್‌ನ ಪ್ರಮುಖ ಬೇಡಿಕೆ. ಆದರೆ, ಅವರು ಹಿಂದೆ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುದರಿಂದ ಈಗ ಸಂಪುಟ ದರ್ಜೆ ಸ್ಥಾನಮಾನ ನೀಡಿದರೆ ಅವಮಾನ ಮಾಡಿದಂತಾಗುತ್ತದೆ ಎಂದು ಸಮನ್ವಯ ಸಮಿತಿ ಸಂಚಾಲಕ ಹಾಗೂ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಹೇಳಿದ್ದಾರೆ.
ತಮಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡದಿದ್ದರೆ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಅಧಿಕೃತವಾಗಿ ಕಚೇರಿ, ಸರ್ಕಾರಿ ವಾಹನ,ಸರ್ಕಾರಿ ಬಂಗಲೆ, ಸರ್ಕಾರಿ ಸಿಬ್ಬಂದಿ ಹೊಂದಲು ಕಷ್ಟವಾಗುತ್ತದೆ ಎಂಬ ಅಭಿಪ್ರಾಯ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದು ಬೇಡ ಎಂಬುದು ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರ ಅಭಿಪ್ರಾಯ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಈ ಬಗ್ಗೆ ಆಸಕ್ತಿ ಇಲ್ಲ. ಇದೀಗ ಡ್ಯಾನಿಷ್ ಅಲಿ ಬಹಿರಂಗವಾಗಿ ಹೇಳಿರುವುದರಿಂದ ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ.
ಸಮ್ಮಿಶ್ರ ಸರ್ಕಾರದ ಸೇತುವೆಯಾಗಿರುವ ಸಿದ್ದರಾಮಯ್ಯನವರ ನಿರ್ಲಕ್ಷ್ಯ ಸಾಧ್ಯವೇ ಇಲ್ಲ. ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮೈತ್ರಿ ಸರ್ಕಾರ 5 ವರ್ಷ ಜನಪರ ಆಡಳಿತ ನೀಡಿ, ರಾಜ್ಯದ ಅಭಿವೃದಿಟಛಿಗೆ ಶ್ರಮಿಸಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಆದರೆ, ಬಿಜೆಪಿ ಶಾಸಕರೇ ಕಾಂಗ್ರೆಸ್‌ಗೆ ಬರಲು ತುದಿಗಾಲಿನಲ್ಲಿ ನಿಂತಿದ್ದಾರೆ.
– ಸತೀಶ್ ಜಾರಕಿಹೊಳಿ, ಶಾಸಕ