Advertisement
ಶಿವಮೊಗ್ಗ ತುಂಗಾ ನದಿ ತೀರದಲ್ಲಿ 2 ವರ್ಷಗಳ ಹಿಂದೆ ನಡೆದಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಕ್ಕೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಸಂಚಿಗೂ ಸಾಮ್ಯತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮಾಜ್ ಮುನೀರ್‌ನನ್ನು ಬಾಡಿ ವಾರೆಂಟ್ ಮೂಲಕ 7 ದಿನಗಳ ವಶಕ್ಕೆ ನೀಡುವಂತೆ ಎನ್‌ಐಎ ಪರ ಹಿರಿಯ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಕೋರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಮಾಜ್ ಮುನೀರ್ ಅಹ್ಮದ್‌ನನ್ನು ವಶಕ್ಕೆ ಪಡೆದುಕೊಂಡು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
Advertisement
NIA: ಕೆಫೆ ಸ್ಫೋಟ; ಜೈಲಿನಲ್ಲಿದ್ದ ಮಾಜ್ ಮುನೀರ್ ಅಹ್ಮದ್ ಎನ್‌ಐಎ ವಶಕ್ಕೆ
10:26 AM Mar 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.