Advertisement

NIA: ಕೆಫೆ ಸ್ಫೋಟ; ಜೈಲಿನಲ್ಲಿದ್ದ ಮಾಜ್‌ ಮುನೀರ್‌ ಅಹ್ಮದ್‌ ಎನ್‌ಐಎ ವಶಕ್ಕೆ

10:26 AM Mar 16, 2024 | Team Udayavani |

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಪ್ರಾಯೋಗಿಕ ಬಾಂಬ್‌ ಸ್ಫೋಟ ಪ್ರಕರಣದ ಮಾಜ್‌ ಮುನೀರ್‌ ಅಹ್ಮದ್‌(26) ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಶಿವಮೊಗ್ಗ ತುಂಗಾ ನದಿ ತೀರದಲ್ಲಿ 2 ವರ್ಷಗಳ ಹಿಂದೆ ನಡೆದಿದ್ದ  ಪ್ರಾಯೋಗಿಕ ಬಾಂಬ್‌ ಸ್ಫೋಟ ಪ್ರಕರಣಕ್ಕೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದ ಸಂಚಿಗೂ ಸಾಮ್ಯತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮಾಜ್‌ ಮುನೀರ್‌ನನ್ನು ಬಾಡಿ ವಾರೆಂಟ್‌ ಮೂಲಕ 7 ದಿನಗಳ ವಶಕ್ಕೆ ನೀಡುವಂತೆ ಎನ್‌ಐಎ ಪರ ಹಿರಿಯ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್‌ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಕೋರ್ಟ್‌ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಮಾಜ್‌ ಮುನೀರ್‌ ಅಹ್ಮದ್‌ನನ್ನು ವಶಕ್ಕೆ ಪಡೆದುಕೊಂಡು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಾಜ್‌ ಮುನೀರ್‌, ಎಂಜಿನಿಯರಿಂಗ್‌ ಪದವೀಧರ. ಭಯೋತ್ಪಾದನಾ ಸಂಘಟನೆಗಳ ಪರವಾಗಿ ಮಂಗಳೂರಿನಲ್ಲಿ ಗೋಡೆ ಬರಹ ಬರೆದಿದ್ದ ಪ್ರಕರಣ ಹಾಗೂ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. 2022ರ ಸೆಪ್ಟೆಂಬರ್‌ನಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಅಂದಿನಿಂದ ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ.

Advertisement

Udayavani is now on Telegram. Click here to join our channel and stay updated with the latest news.

Next