ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಪ್ರಚಾರದ ನಂತರ
ಮತದಾನ ಹಾಗೂ ಫಲಿತಾಂಶದ ಲೆಕ್ಕಾಚಾರದಲ್ಲಿದ್ದಾರೆ.
Advertisement
ಪ್ರಚಾರದಿಂದಾಗಿ ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿಯವರು ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು, ಜೆಪಿ ನಗರ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಲೇ ಉಪಚುನಾವಣೆ ಕುರಿತು ಸ್ಥಳೀಯ ಮುಖಂಡರಿಂದ ಮಾಹಿತಿ ಪಡೆದರು. ದೇವೇಗೌಡರು ಸಹ ಪದ್ಮನಾಭನಗರ ನಿವಾಸದಲ್ಲೇ ಜಿಲ್ಲಾ ನಾಯಕರ ಜತೆ ದೂರವಾಣಿ ಮೂಲಕ ಮಾತನಾಡಿ, ಮತದಾನದ ದಿನ ಎಚ್ಚರ ತಪ್ಪದಂತೆ ಸೂಚನೆ ನೀಡಿದರು.
ಗೆದ್ದರೆ ರಾಜ್ಯದ ಲೆಕ್ಕಾಚಾರವೇ ಬುಡಮೇಲು ಆಗಲಿದೆ ಎಂಬ ನಂಬಿಕೆ ಜೆಡಿಎಸ್‌ನದು. ಬಿಜೆಪಿಗೆ ಎಚ್.ಡಿ.ಕುಮಾರಸ್ವಾಮಿ ಹತ್ತು ಪ್ರಶ್ನೆ
ಬೆಂಗಳೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹರು ಹಾಗೂ ಬಿಜೆಪಿ ವಿರುದ್ಧ ಮಾಜಿ ಸಿಎಂ
ಎಚ್.ಡಿ.ಕುಮಾರಸ್ವಾಮಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು, ಹತ್ತು ಪ್ರಶ್ನೆಗಳ ಮೂಲಕ ಹಿಂದಿನ ಸಮ್ಮಿಶ್ರ ಸರ್ಕಾರ ಪತನ, ನಂತರದ ಬೆಳವಣಿಗೆ, ಆಪರೇಷನ್ ಕಮಲ ಪ್ರಶ್ನಿಸಿದ್ದಾರೆ. ನನ್ನ ನೇತೃತ್ವದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಕೂಡಲೇ ಅತೃಪ್ತಗೊಂಡಿದ್ದ ಬಿಜೆಪಿ, ಅಧಿಕಾರದ ಹುಚ್ಚು ಹಿಡಿಸಿಕೊಂಡು
ಕೂಗು ಮಾರಿಯಂತಾಗಿತ್ತು. ನಾನು ಮಾಡದ ತಪ್ಪುಗಳಿಗೆ ನನ್ನನ್ನು ಬಿಗಿಯುತ್ತಾ, ಆಡಳಿತ ಮಾಡಲು ಬಿಡದ ಬಿಜೆಪಿ ಅನರ್ಹರ ಆಕ್ರಮ ಸಂಬಂಧದೊಂದಿಗೆ ಅನೈತಿಕ ಸರ್ಕಾರ ರಚಿಸಿ ಇದೀಗ ರಾಜ್ಯ ಅನಾಹುತದ ಹಾದಿಯಲ್ಲಿ ಕರೆದೊಯ್ಯುತ್ತಿದೆ. ಈ ಮೂಲಕ ದೇಶದಲ್ಲಿ ಕೆಟ್ಟ ಸಂಪ್ರದಾಯವೊಂದಕ್ಕೆ ರಾಜ್ಯ ಮಾದರಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Related Articles
ಉಪ ಚುನಾವಣೆಯಲ್ಲಿ ಮತದಾರರು ಅನರ್ಹರ ವಿರುದ್ಧ ತೀರ್ಪು ನೀಡುವಂತೆ ದೇವೇಗೌಡರು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “ಕರ್ನಾಟಕದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ “ಅನರ್ಹರ’ ವಿರುದಟಛಿ ತೀರ್ಪು ನೀಡುವ ಪರಮಾಧಿಕಾರ ರಾಜ್ಯದ ಜನತೆಗೆ ಸಿಕ್ಕಿದೆ. ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ. ಈ ಸಂದರ್ಭದಲ್ಲಿ
ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆ ಎತ್ತಿ ಹಿಡಿಯುವ ತೀರ್ಪು ನೀಡಬೇಕಾಗಿ ಮನವಿ
ಮಾಡಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಚಾರ್ಜ್‌ಶೀಟ್‌ನಲ್ಲೇನಿದೆ?ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಐದು ವರ್ಷ ನಡೆಯಲು ಬಿಡದ ಯಡಿಯೂರಪ್ಪ ಅವರದ್ದು
ಅಧಿಕಾರ ಲಾಲಸೆಯಾಗಿರಲಿಲ್ಲವೇ? ನಿಮ್ಮದು ಸಾಂವಿಧಾನ ಬದ್ಧ ಸರ್ಕಾರವೇ? ಆಪರೇಷನ್‌ಗೆ ಒಂದಾಣೆ ಖರ್ಚು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳಿ ಹಠದ ಸರ್ಕಾರದ ಒಂದೇ ಒಂದು ಸಾಧನೆ ತಿಳಿಸಬಹುದೇ? ಬಿಜೆಪಿ ಸರ್ಕಾರ ರಚಿಸಲು ಮೋದಿ , ಶಾ ಒಪ್ಪಿದ್ದರೇ? ಜಾತಿವಾದಿಗಳಲ್ಲವೇ ನೀವು? ಹಾವಿಗೆ ಹಾಲೆರದಂತೆ ಆಯಿತೇ? (ಕೆ.ಆರ್.ಪೇಟೆ ಮತ್ತು ಮಹಾಲಕ್ಷ್ಮೀ
ಬಡಾವಣೆಯ ಅನರ್ಹ ಶಾಸಕರು) ಮಂಡ್ಯ ಜನರ ಎದುರು ನಿಲ್ಲಲು ಬಿಎಸ್‌ವೈಗೆ ನಾಚಿಕೆಯಾಗದೇ? ಎಸ್.ಎಂ.ಕೃಷ್ಣರದ್ದು ಧರ್ಮ ಕಾರ್ಯವೋ ?