Advertisement

Help Line: “ಇ-ಖಾತಾ ಬಗ್ಗೆ ಲಂಚ ಕೇಳಿದ್ರೆ 9480683695ಕ್ಕೆ ಕರೆ ಮಾಡಿ’

11:28 AM Dec 08, 2024 | |

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ)ವ್ಯಾಪ್ತಿಯಲ್ಲಿ  ಸಾರ್ವಜನಿಕರಿಗೆ ಇ-ಖಾತಾ ಪಡೆಯಲು ಅನುಕೂಲ ವಾಗುವ ನಿಟ್ಟಿನಲ್ಲಿ, ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿಯನ್ನು ಆರಂಭಿಸಲಾಗಿದೆ.

Advertisement

ಇ-ಖಾತಾ ಪಡೆ ಯುವ ವಿಚಾರದಲ್ಲಿ ಯಾರೇ ಲಂಚ ಕೇಳಿದರೆ ಅಥವಾ ವಿಳಂಬ ವಾದರೆ ನಾಗರಿಕ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಸಹಾಯವಾಣಿ ಸಂಖ್ಯೆ  9480683695 ಪ್ರಾರಂಭಿಸಲಾಗಿದೆ. ಇ-ಖಾತಾ ಸಂಬಂಧಿಸಿದ ಗೊಂದಲಗಳನ್ನು ನಿವಾರಣೆ ಮಾಡಲು ಇದು ಸಹಾಯವಾಗಲಿದೆ. ಸಾರ್ವಜನಿಕರಲ್ಲಿ ಇ-ಖಾತಾ ಕುರಿತು ಯಾವುದೇ ರೀತಿಯ ಸಮಸ್ಯೆಗಳು ಇದ್ದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಿರ್ದೇಶನದಂತೆ ಸಾರ್ವಜನಿಕರಿಗೆ ಇ-ಖಾತಾಗಳು ಸುಗಮವಾಗಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು, ಬಿಬಿಎಂಪಿಯು ತಕ್ಷಣದ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. ಜತೆಗೆ ನಾಗರಿಕರು ತಾವೇ

ಆನ್‌ಲೈನ್‌ನಲ್ಲಿ ಇ-ಖಾತಾವನ್ನು ರಚಿಸಲು ಪ್ರೋತ್ಸಾಹಿಸಲಾಗುತ್ತದೆ. ಆಂಗ್ಲ ಭಾಷೆ: :https://youtu.be/GL8CWs dn3woವೆಬ್‌ಸೈಟ್‌ ಸಂಪರ್ಕದ ಮೂಲಕ ವೀಕ್ಷಣೆ ಮಾಡಬಹುದಾಗಿದೆ ಎಂದರು.

Advertisement

200ಕ್ಕೂ ಅಧಿಕ ಕಂದಾಯ ಅಧಿಕಾರಿಗಳ ನಿಯೋಜನೆ:  ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಗಳನ್ನು ನಾಗರಿಕರಿಗೆ ಸುಗಮವಾಗಿ ಇ-ಖಾತಾ ನೀಡಲು ವಿಸ್ತರಿಸಲಾಗಿದೆ. 1000ಕ್ಕೂ ಅಧಿಕ ಹೆಚ್ಚುವರಿ ಕೇಸ್‌ ವರ್ಕರ್‌ ಲಾಗಿನ್‌ಗಳನ್ನು ನೀಡಲಾಗಿದೆ. 200ಕ್ಕೂ ಅಧಿಕ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯಾರಿಂದಾದರೂ ಅನಗತ್ಯ ವಿಳಂಬವಾದಲ್ಲಿ, ಪಾಲಿಕೆಯು ಕ್ರಮ ಕೈಗೊಳ್ಳಲಿದೆ. ಜತೆಗೆ ನಾಗರಿಕರು ಬದಲಿ ಸಹಾಯಕ ಕಂದಾಯ ಅ ಧಿಕಾರಿ ಇಲ್ಲವೆ ಕೇಸ್‌ ವರ್ಕರ್‌ಗಳನ್ನು ಸಹ ಭೇಟಿ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next