Advertisement

ಎಂಇಎಸ್‌-ಶಿವಸೇನೆ ವಿರುದ್ದ ಕ್ರಮಕ್ಕೆ ಆಗ್ರಹ

11:09 AM Dec 18, 2021 | Team Udayavani |

ಶಹಾಬಾದ: ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರದಲ್ಲಿ ಎಂಇಎಸ್‌ ಹಾಗೂ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಸುಟ್ಟ ಘಟನೆ ಖಂಡಿಸಿ ಶುಕ್ರವಾರ ತಾಲೂಕು ಕರವೇ ವತಿಯಿಂದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಗುರುರಾಜ ಸಂಗಾವಿಗೆ ಮನವಿ ಸಲ್ಲಿಸಲಾಯಿತು.

Advertisement

ನಾಡ ಧ್ವಜ ಸುಟ್ಟು ಕನ್ನಡ ನಾಡಿಗೆ ಅಪಮಾನ ಮಾಡಿ ವಿಕೃತಿ ಮೆರೆದಿದ್ದಾರೆ. ಘಟನೆ ನಡೆದು ಮೂರು ದಿನ ಕಳೆದರೂ ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ. ಕರ್ನಾಟಕ ಸರ್ಕಾರಕ್ಕೆ ರಾಜ್ಯದ ಬಗ್ಗೆ ಗೌರವ ಇದ್ದರೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆಯಬೇಕಿತ್ತು. ಘಟನೆಗೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದರು.

ಕನ್ನಡ ಧ್ವಜ ಸುಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿ ಎಂಇಎಸ್‌ ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್‌ ಠಾಕ್ರೆ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಕರವೇ ತಾಲೂಕು ಅಧ್ಯಕ್ಷ ವಿಶ್ವರಾಜ ಫಿರೋಜಬಾದ, ಕರವೇ ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಗೋಪಾಲ ನಾಟೀಕಾರ, ಕರವೇ ಜಿಲ್ಲಾಧ್ಯಕ್ಷ ಸಂತೋಷ ಚೌಧರಿ, ಜಿಲ್ಲಾ ಗೌರವಾಧ್ಯಕ್ಷ ಮಂಜು ಕುಸನೂರ, ಚಿತ್ತಾಪುರ ತಾಲೂಕಾಧ್ಯಕ್ಷ ನರಹರಿ ಕುಲಕರ್ಣಿ, ಕ್ರಾಂತಿವೀರ ಸಂಗೊಳಿ ರಾಯಣ್ಣ ಯುವ ಘರ್ಜನೆ ಜಿಲ್ಲಾಧ್ಯಕ್ಷ ಬಸವರಾಜ ಮದ್ರಿಕಿ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಕಾರೊಳ್ಳಿ, ದಸಂಸ ಜಿಲ್ಲಾ ಸಮಿತಿ ಸಂಚಾಲಕ ಬಸವರಾಜ ಮಯೂರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next