Advertisement

ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಬಂದ್ ಗೆ ಕರೆ: ರಸ್ತೆ ತಡೆದು ಪ್ರತಿಭಟನೆ !

08:25 AM Nov 26, 2020 | Mithun PG |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ, ಅಖಂಡ ಬಳ್ಳಾರಿ ಜಿಲ್ಲೆಯಾಗಿ ಉಳಿಸುವಂತೆ ಆಗ್ರಹಿಸಿ ಬಳ್ಳಾರಿ ಬಂದ್ ಗೆ ಕರೆ ನೀಡಿದ್ದ ಅಖಂಡ ಬಳ್ಳಾರಿ ಜಿಲ್ಲೆ ಹೋರಾಟ ಸಮಿತಿ ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಸ್ತೆ ತಡೆ ನಡೆಸಿದರು.

Advertisement

ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ವಿವಿಧ ಕನ್ನಡಪರ, ರೈತಪರ 15ಕ್ಕೂ ಹೆಚ್ಚು ಸಂಘಟನೆಗಳ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಬಂದ್ ಚಾಲನೆ ನೀಡಿದರು. ಬಳಿಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನ ತಡೆದರು.

ಬಳ್ಳಾರಿ ಬಂದ್ ಪೂರ್ವ ನಿಯೋಜಿತವಾಗಿದ್ದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ನಗರದ ಪ್ರಮುಖ ರಸ್ತೆಯಲ್ಲಿ ಔಷಧ ಮಳಿಗೆಯನ್ನು ಹೊರತುಪಡಿಸಿ ಯಾವುದೇ ವಾಣಿಜ್ಯ ಮಳಿಗೆಗಳು ತೆರೆದಿರಲಿಲ್ಲ. ಬಂದ್ ಆಟೋ ಚಾಲಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದರಿಂದ ಬಹುತೇಕ ಅಟೋಗಳು ಸ್ಥಗಿತಗೊಂಡಿದ್ದವು.

ಇದನ್ನೂ ಓದಿ: ನಿವಾರ್ ಅಬ್ಬರ-ಜನಜೀವನ ತತ್ತರ: ತ. ನಾಡು, ಪುದುಚೇರಿಯಲ್ಲಿ ಭಾರೀ ವರ್ಷಧಾರೆ !

Advertisement

ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸ್ ಇಲಾಖೆ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಹ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.

ನಗರದ ಆಯಕಟ್ಟಿ ಸ್ಥಳದಲ್ಲಿ ಹದ್ದಿನ ಕಟ್ಟಿರುವ ಪೊಲೀಸ್ ಇಲಾಖೆ 3 ಡಿವೈಎಸ್ ಪಿ, 18 ಸಿಪಿಐ, 40  ಪಿಎಸ್ಐ, 200 ಪೊಲೀಸ್ ಪೇದೆ, 3 ಡಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿಗಳೇ ಗಮನಿಸಿ: ಪ್ರಸಿದ್ಧ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯೇ ಇಲ್ಲ !

Advertisement

Udayavani is now on Telegram. Click here to join our channel and stay updated with the latest news.

Next